ಡಿ.ಆರ್.ಡಿ.ಒ. ಮಾಜಿ ವಿಜ್ಞಾನಿ ಹಾಗೂ ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ (61) ಅವರು ನಿಧನರಾಗಿದ್ದಾರೆ. ವಾರದ ಹಿಂದೆ ತೀವ್ರ ಹೃದಯಾಘಾತಕ್ಕೆ ಗುರಿಯಾಗಿದ್ದ ಅವರನ್ನು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿಗೆ ಆಕ್ಸಿಜನ್ ಸರಬರಾಜು ನಿಂತಿದ್ದರಿಂದ ಮೆದುಳು ನಿಷ್ಕ್ರಿಯವಾಗಿ ಸಾವು ಸಂಭವಿಸಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಡಿ.ಆರ್.ಡಿ.ಒ.ದಲ್ಲಿ 22 ವರ್ಷ ಕಾರ್ಯ ನಿರ್ವಹಿಸಿದ್ದ ಅವರು, ವಿಜ್ಞಾನದ ವಿಷಯಗಳನ್ನು ಸರಳವಾಗಿ ಬರೆಯುವ ಮೂಲಕ ಜನಪ್ರಿಯ ರಾಗಿದ್ದರು. ಹಲವಾರು ಪತ್ರಿಕೆಗಳಲ್ಲಿ ಅವರು ಅಂಕಣಕಾರರಾಗಿದ್ದರು. 2018ರಲ್ಲಿ ಅವರು ಕನ್ನಡ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ ಪಡೆದಿದ್ದರು. ಶುಕ್ರವಾರವಷ್ಟೇ ಅವರಿಗೆ ಕನ್ನಡ ಪುಸ್ತಕ ಪ್ರಾಧಿಕಾರದ ಡಾ. ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿ ಪ್ರಕಟಿಸಲಾಗಿತ್ತು. ಅದೇ ದಿನವೇ ಅವರು ಕೊನೆಯುಸಿರೆಳೆದಿದ್ದಾರೆ.
December 26, 2024