ದಾವಣಗೆರೆ ತಾಲ್ಲೂಕು ದೊಡ್ಡಬಾತಿ ಗ್ರಾಮದ ವಾಸಿ ದಿ|| ಹಲಬಣ್ಣರ ಪರಸಪ್ಪನವರ ಧರ್ಮಪತ್ನಿ ಶ್ರೀಮತಿ ಯಲ್ಲಮ್ಮ ಅವರು ದಿನಾಂಕ 10.07.2021ರ ಶನಿವಾರ ಸಂಜೆ 5.10 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 90 ವರ್ಷ ವಯಸ್ಸಾಗಿತ್ತು. ಮಕ್ಕಳು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 11.07.2021ರ ಭಾನುವಾರ ಮಧ್ಯಾಹ್ನ 12 ಗಂಟೆಗೆ ನೀಲಾನಹಳ್ಳಿಯ ಮೃತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 15, 2025