ದಾವಣಗೆರೆ ವಿದ್ಯಾನಗರ 1ನೇ ಬಸ್ ಸ್ಟಾಪ್ ಬಳಿ ವಾಸಿ ಜಿ.ಹೆಚ್. ಶಂಕರಪ್ಪ ಅವರ ಧರ್ಮಪತ್ನಿ ಶ್ರೀಮತಿ ಪ್ರೇಮಲೀಲಾ ಅವರು ದಿನಾಂಕ 20.07.2021ರ ಮಂಗಳವಾರ ರಾತ್ರಿ 9.45ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 68 ವರ್ಷ ವಯಸ್ಸಾಗಿತ್ತು. ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು- ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 21.07.2021ರ ಬುಧವಾರ ಮಧ್ಯಾಹ್ನ 2 ಗಂಟೆಗೆ ಹೊಳಲ್ಕೆರೆ ತಾಲ್ಲೂಕಿನ ಗುಂಜಿಗನೂರು ಗ್ರಾಮದಲ್ಲಿ ನೆರವೇರಿಸಲಾಗುವುದು. ಮೃತರ ಪಾರ್ಥಿವ ಶರೀರವನ್ನು ಬುಧವಾರ ಬೆಳಿಗ್ಗೆ 11 ಗಂಟೆಯವರೆಗೆ ದಾವಣಗೆರೆ ವಿದ್ಯಾನಗರದ ಸ್ವಗೃಹದಲ್ಲಿ ಇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
February 26, 2025