ದಾವಣಗೆರೆ ಆಂಜನೇಯ ಬಡಾವಣೆ 5ನೇ ಕ್ರಾಸ್ ವಾಸಿ ದಾವಣಗೆರೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶಿವರಾಜ್ ಪಾಟೀಲ್ ಅವರ ತಂದೆ, ಸಿ.ಜಿ. ಆಸ್ಪತ್ರೆ ನಿವೃತ್ತ ಸೂಪರಿಂಟೆಂಡೆಂಟ್ ಬಾಡದ ಕೆ.ಎಂ. ಚಂದ್ರಶೇಖರಯ್ಯ ಅವರು ದಿನಾಂಕ 4.5.2021ರ ಮಂಗಳವಾರ ರಾತ್ರಿ 9 ಗಂಟೆಗೆ ನಿಧನರಾದರು. ಮೃತರಿಗೆ 87 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 5.5.2021ರ ಬುಧವಾರ ಮಧ್ಯಾಹ್ನ 12 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ.ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024