ಜಿಲ್ಲೆಯ ಹಿರಿಯ ಕಬಡ್ಡಿ ಕ್ರೀಡಾಪಟುಗಳೂ, ಪ್ರಥಮ ದರ್ಜೆ ಗುತ್ತಿಗೆದಾರರೂ, ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘದ ಮಾಜಿ ಅಧ್ಯಕ್ಷರೂ ಆದ ಎ.ಎಂ. ರಾಮಣ್ಣ ಅವರು ಇಂದು ಮುಂಜಾನೆ 6.30ಕ್ಕೆ ನಿಧನರಾದರು. ಮೃತರಿಗೆ ಸುಮಾರು 58 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬಾಪೂಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ಇಂದು ಸಂಜೆ ಸ್ಥಳೀಯ ರುದ್ರಭೂಮಿಯಲ್ಲಿ ನಡೆಯಿತುಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024