ನಾಡಿನ ಹಿರಿಯ ಪತ್ರಕರ್ತರೂ ಆದ ರಂಗಕರ್ಮಿ ಗುಡಿಹಳ್ಳಿ ನಾಗರಾಜ್ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಮಧ್ಯಾಹ್ನ ನಿಧನರಾದರು. ಮೃತರಿಗೆ ಸುಮಾರು 67 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೂಲತಃ ಹರಪನಹಳ್ಳಿ ತಾಲ್ಲೂಕಿನ ಕೆರೆಗುಡಿಹಳ್ಳಿ ಗ್ರಾಮದವರಾದ ನಾಗರಾಜ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ನಾಳೆ ದಿನಾಂಕ 27ರ ಶುಕ್ರವಾರ ಬೆಳಿಗ್ಗೆ ಕೆರೆ ಗುಡಿಹಳ್ಳಿಯಲ್ಲಿ ನಡೆಯಲಿದೆ ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
January 10, 2025