ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿ ದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕಳೆದ ಜುಲೈನಲ್ಲಿ ಮನೆಯಲ್ಲಿ ಯೋಗಾಸನ ಮಾಡುತ್ತಿದ್ದ ವೇಳೆ ಆಸ್ಕರ್ ಫರ್ನಾಂಡೀಸ್ ಜಾರಿ ಬಿದ್ದಿದ್ದರು. ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ತೆರಳಿದಾಗ ತಲೆಯ ಒಳ ಭಾಗಕ್ಕೆ ಪೆಟ್ಟಾಗಿರುವುದು ತಿಳಿದುಬಂದಿತ್ತು. ಬಳಿಕ ಅವರಿಗೆ ಮೆದುಳಿನ ಶಸ್ತ್ರ ಚಿಕಿತ್ಸೆ ನಡೆದಿತ್ತಾದರೂ ಆರೋಗ್ಯದಲ್ಲಿ ಚೇತರಿಕೆಯಾಗಿರಲಿಲ್ಲ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ.
July 24, 2024