ಕನ್ನಡ ಚಳುವಳಿಯ ಹಿರಿಯ ನಾಯ ಕರೂ, ದಿಟ್ಟ ಹೋರಾಟ ಗಾರರೂ ಆದ ನಗರದ ನೂ.ತಿ. ನಾರಾಯಣರಾವ್ ಅವರು ಇಂದು ಮಧ್ಯಾಹ್ನ 12.30ಕ್ಕೆ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಂಜೀವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಸುಮಾರು 78 ವರ್ಷ ವಯಸ್ಸಾಗಿತ್ತು. ಪತ್ನಿ – ನಿವೃತ್ತ ಶಿಕ್ಷಕಿ ಶ್ರೀಮತಿ ರುಕ್ಮಿಣಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ಇಂದು ಸಂಜೆ ಸ್ಥಳೀಯ ವೈಕುಂಠಧಾಮದಲ್ಲಿ ನಡೆಯಿತು ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
January 10, 2025