ದಾವಣಗೆರೆ ಎಸ್.ಎಸ್.ಬಡಾವಣೆಯಲ್ಲಿರುವ, ರಾಘವೇಂದ್ರ ನರ್ಸಿಂಗ್ ಕಾಲೇಜು ಹತ್ತಿರ, 4ನೇ ಮುಖ್ಯ ರಸ್ತೆ, 2ನೇ ಕ್ರಾಸ್ ನಿವಾಸಿ, ಆರ್.ಎಸ್.ದಯಾನಂದ ಅವರು ದಿನಾಂಕ 11.07.2020 ರ ಸಂಜೆ 6-30 ಕ್ಕೆ ಹೃದಯಾಘಾತದಿಂದ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 67 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ ಮತ್ತು ಪುತ್ರಿ, ಅಳಿಯ, ಮೊಮ್ಮಗಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 12.07.2020ರ ಭಾನುವಾರ ಬೆಳಿಗ್ಗೆ 10-30ಕ್ಕೆ ಶಾಮನೂರು ಬಳಿ ಇರುವ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
November 23, 2024