ಮೂಲತಃ ಚನ್ನಗಿರಿ ತಾಲ್ಲೂಕು ಕಾರಿಗನೂರಿನವರಾದ ದಾವಣಗೆರೆ ನಗರದ ಎಂ.ಸಿ.ಸಿ. ಬಿ ಬ್ಲಾಕ್ ನಲ್ಲಿರುವ ಸುಕ್ಷೇಮ ಆಸ್ಪತ್ರೆ ಹತ್ತಿರದ ವಾಸಿ, ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಶ್ರೀ ಹೆಚ್.ಡಿ. ನಾಯ್ಕ್ ಅವರು, ದಿನಾಂಕ 28.10.2020ರ ಬುಧವಾರ ರಾತ್ರಿ 10 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 82 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 29.10.2020ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಕಾರಿಗನೂರಿನಲ್ಲಿರುವ ದಿವಂಗತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 9, 2025