ರಾಜ್ಯದ ದಲಿತ ಸಂಘರ್ಷ ಸಮಿತಿಯ ಹಿರಿಯ ನಾಯಕರೂ, ಭದ್ರಾ ಮೇಲ್ದಂಡೆ ನೀರಾವರಿ ಹೋರಾಟ ಸಮಿತಿಯ ಗೌರವಾಧ್ಯಕ್ಷರೂ ಆದ ಎಂ. ಜಯಣ್ಣ ಅವರು ಬೆಂಗಳೂರಿನಲ್ಲಿ ನಿಧನರಾದರು. ಬಹು ಅಂಗಾಂಗಗಳ ವೈಫಲ್ಯತೆಯಿಂದಾಗಿ ಇಲ್ಲಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ರಾತ್ರಿ 9.30ರ ವೇಳೆಗೆ ಕೊನೆಯುಸಿರೆಳೆದರು. ಮೃತರಿಗೆ ಸುಮಾರು 70 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿರುವ ಮೃತರ ಪಾರ್ಥಿವ ಶರೀರವನ್ನು ನಾಳೆ ದಿನಾಂಕ 10ರ ಮಂಗಳವಾರ ಬೆಳಿಗ್ಗೆ ಚಿತ್ರದುರ್ಗದಲ್ಲಿರುವ ಅವರ ನಿವಾಸಕ್ಕೆ ತಂದು, ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
November 28, 2024