ದಾವಣಗೆರೆ ಜಿಲ್ಲೆ, ಜಗಳೂರು ತಾಲ್ಲೂಕು ಕಮಂಡಲಗೊಂದಿ ಗ್ರಾಮದ ವಾಸಿ ಶ್ರೀ ಜಿ.ಬಿ. ಹನುಮಂತರೆಡ್ಡಿ ಅವರು, ದಿನಾಂಕ 13.11.2020ರ ಶುಕ್ರವಾರ ರಾತ್ರಿ 8.10 ಕ್ಕೆ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 75 ವರ್ಷ ವಯಸ್ಸಾಗಿತ್ತು. ನಾಲ್ವರು ಪುತ್ರಿಯರು, ಓರ್ವ ಪುತ್ರ, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 14.11.2020 ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಕಮಂಡಲಗೊಂದಿ ಗ್ರಾಮದ ಮೃತರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 13, 2025