ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ನ ಉಪಾಧ್ಯಕ್ಷರಾದ ಶ್ರೀ ಅಂದನೂರು ಮುಪ್ಪಣ್ಣ ಅವರ ಧರ್ಮಪತ್ನಿ ಶ್ರೀಮತಿ ಅಂದನೂರು ಸಂಧ್ಯಾ ಅವರು ದಿನಾಂಕ 23.12.2020ರ ಬುಧವಾರ ಬೆಳಗ್ಗೆ 10.30 ಗಂಟೆಗೆ ಲಿಂಗೈಕ್ಯರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 60 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ದಿನಾಂಕ 24.12.2020ರ ಗುರುವಾರ ಬೆಳಿಗ್ಗೆ 10 ರ ವರೆಗೆ ಎಂ.ಸಿ.ಸಿ. `ಬಿ’ ಬ್ಲಾಕ್, 7 ನೇ ಮೇನ್, 4 ನೇ ಕ್ರಾಸ್ ಸ್ವಿಮ್ಮಿಂಗ್ ಪೂಲ್ ಹಿಂಭಾಗ, ದಾವಣಗೆರೆ ಇಲ್ಲಿರುವ ಮೃತರ ಸ್ವಗೃಹದಲ್ಲಿ ಇರಿಸಲಾಗಿದೆ. ನಂತರ ದಾವಣಗೆರೆ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 6, 2025