ಚಿತ್ರದುರ್ಗ, ಆ.19- ಇಲ್ಲಿನ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಶಾಖಾ ಮಠವಾದ ಚನ್ನಗಿರಿ ಶ್ರೀ ಹಾಲಸ್ವಾಮಿ ವಿರಕ್ತಮಠದ ಶ್ರೀ ಜಯದೇವ ಸ್ವಾಮೀಜಿ ಇಂದು ಲಿಂಗೈಕ್ಯರಾಗಿದ್ದಾರೆ. ಶ್ರೀಗಳಿಗೆ ಸುಮಾರು 77 ವರ್ಷ ವಯಸ್ಸಾಗಿತ್ತು. ನ್ಯುಮೋನಿಯಾ, ಕಫ, ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀಗಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ವಿಧಿವಶರಾಗಿದ್ದಾರೆ. ನಾಳೆ ದಿನಾಂಕ 20ರ ಗುರುವಾರ ಅಪರಾಹ್ನ 12 ಗಂಟೆಗೆ ಚನ್ನಗಿರಿ ಶಿವಲಿಂಗ ಸ್ವಾಮಿ ಮಠದ ಆವರಣದಲ್ಲಿ ಬಸವತತ್ವದ ವಿಧಿ-ವಿಧಾನಗಳಂತೆ ಡಾ. ಶಿವಮೂರ್ತಿ ಮುರುಘಾ ಶರಣರ ನೇತೃತ್ವದಲ್ಲಿ ಶ್ರೀಗಳ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.
January 11, 2025