ಹರಪನಹಳ್ಳಿ ತಾಲ್ಲೂಕಿನ ಚಿರಸ್ತಹಳ್ಳಿ ಗ್ರಾಪಂ ಅಧ್ಯಕ್ಷರೂ, ಪಿಕಾರ್ಡ್ ಬ್ಯಾಂಕ್ ನಿರ್ದೇಶಕರೂ ಆದ ಅಲಗಿಲವಾಡ ಗ್ರಾಮದ ಕೆ.ಸಿದ್ದಲಿಂಗಪ್ಪ (69) ಅವರು ಕೋವಿಡ್ ಸೋಂಕಿನಿಂದ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ನಿಧನರಾದರು. ಮೃತ ಸಿದ್ದಲಿಂಗಪ್ಪ ಎರಡನೇ ಬಾರಿಗೆ ಚಿರಸ್ಥಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಹಾಗೂ ಎರಡನೇ ಬಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ನ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪಿಕಾರ್ಡ್ ಬ್ಯಾಂಕ್ನ ಉಪಾಧ್ಯಕ್ಷರಾಗಿ, ಪ್ರಭಾರಿ ಅಧ್ಯಕ್ಷರಾಗಿ, ಕಾಂಗ್ರೆಸ್ ಮುಖಂಡರಾಗಿಯೂ ಸಹ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ,ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
February 26, 2025