ದಾವಣಗೆರೆ ಸಿಟಿ ಶಾಮನೂರು ವಾಸಿ ಬಿಂದಪ್ಳರ ಶ್ರೀಕಂಠಪ್ಪನವರ ಧರ್ಮಪತ್ನಿ ಶ್ರೀಮತಿ ಬಿಂದಪ್ಳರ ಚಂದ್ರಪ್ರಭಾ ಇವರು ದಿನಾಂಕ 28.01.2023ರ ರಾತ್ರಿ 8.45ಕ್ಕೆ ಹೃದಯಘಾತದಿಂದ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 63 ವರ್ಷ ವಯಸ್ಸಾಗಿತ್ತು. ಪತಿ, ಓರ್ವ ಪುತ್ರಿ, ಅಳಿಯ, ಮೊಮ್ಮಗಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 29.01.2023ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಶಾಮನೂರು ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.