ದಾವಣಗೆರೆ, ಏ.14- ಡಾ. ಅಂಬೇಡ್ಕರ್ ಅವರ ಚಿಂತನೆಯ ಪ್ರತಿರೂಪವಾಗಿರುವ ಸಂವಿಧಾನಕ್ಕೆ ಎದುರಾಗಿರುವ ಬೆದರಿಕೆಯ ವಿರುದ್ಧ ಹೋರಾಡುವುದೇ ಸಂವಿಧಾನ ಶಿಲ್ಪಿಗೆ ನಾವು ಸಲ್ಲಿಸುವ ಗೌರವ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.
ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಗೃಹ ಕಛೇರಿ ಶಿವಪಾರ್ವತಿಯಲ್ಲಿ ಇಂದು ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರು ಮಾತನಾಡಿದರು.
ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗದೆ ರಾಜಕೀಯ ಪ್ರಜಾಪ್ರಭುತ್ವ ಬಾಳಲಾರದು. ನಿರ್ಲಕ್ಷ್ಯ, ತುಚ್ಛೀಕರಣ, ದೈವೀಕರಣದ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದಮನಿಸಲು ಪ್ರಯತ್ನಿಸಿ, ವಿಫಲರಾದ ಕೋಮುವಾದಿ ಶಕ್ತಿಗಳು ಈಗ ಬಾಬಾ ಸಾಹೇಬರನ್ನು ಆಪೋಶನ ತೆಗೆದುಕೊಂಡು ತಮ್ಮವರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಈ ಹುನ್ನಾರದ ಬಗ್ಗೆ ನಾವು ಎಚ್ಚರವಾಗಿರಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಎಸ್.ಮಲ್ಲಿಕಾರ್ಜುನ, ಕಾಂಗ್ರೆಸ್ ಅಧ್ಯಕ್ಷ ಆಯೂಬ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಅನಿತಾಬಾಯಿ ಮಾಲತೇಶ್, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಾಗರ್ ಎಲ್.ಹೆಚ್., ಮೈನುದ್ದೀನ್, ಪ್ರೊ|| ಸಿ.ಹೆಚ್.ಮುರುಗೇಂದ್ರಪ್ಪ, ರಂಗಸ್ವಾಮಿ, ತಿಪ್ಪೇಸ್ವಾಮಿ, ಶಾಮನೂರು ಕುಮಾರ್, ಟಿ.ರಮೇಶ್, ರಾಘವೇಂದ್ರ ಗೌಡ, ಆವರಗೆರೆ ಮಂಜು ಮತ್ತು ಇತರರು ಭಾಗವಹಿಸಿದ್ದರು.