ಜಿಲ್ಲಾಡಳಿತದಿಂದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ

ಜಿಲ್ಲಾಡಳಿತದಿಂದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ

ದಾವಣಗೆರೆ, ಏ. 14- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಶುಕ್ರವಾರ ಜಿಲ್ಲಾಡಳಿತ ಕಛೇರಿ ಸಭಾಂಗಣದಲ್ಲಿ ಜರುಗಿದ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು  ಭಾವಚಿತ್ರಕ್ಕೆ ಜಿಲ್ಲಾಧಿಕಾರಿ  ಪುಷ್ಪಾರ್ಚನೆ ಮಡುವ ಮೂಲಕ ಆಚರಿಸಲಾಯಿತು.

ಕಲಾವಿದರಾದ ಐರಣಿ ಚಂದ್ರು ಜಾಗೃತಿ ಗೀತೆ ಹಾಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಾಗರಾಜ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಡಿ.ಡಿ ಮಂಜಾನಾಯ್ಕ್, ಅಲ್ಪ ಸಂಖ್ಯಾತ ವರ್ಗಗಳ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ವಾಮದೇವಪ್ಪ, ದಲಿತ ಸಂಘರ್ಷ ಸಮಿತಿ  ರಾಜ್ಯ ಸಂಘಟನಾ ಸಂಚಾಲಕ ಕಬ್ಬಳ್ಳಿ ಮೈಲಪ್ಪ, ರೈತ ಸಂಘದ ಕಾರ್ಯಾಧ್ಯಕ್ಷ ಚಿನ್ನಸಮುದ್ರ ಶೇಖರ್ ನಾಯ್ಕ್, ಸಮಗಾರ ಸಮಾಜದ ಜಿಲ್ಲಾಧ್ಯಕ್ಷ ಫಕ್ಕೀರಪ್ಪ ಉಪಸ್ಥಿತರಿದ್ದರು.

error: Content is protected !!