ಬೆಳೆ ಹಾನಿ ವೀಕ್ಷಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಬೆಳೆ ಹಾನಿ ವೀಕ್ಷಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಾವಣಗೆರೆ, ಮೇ 23- ಭಾನುವಾರ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಾನಿಗೀಡಾದ ಬೆಳೆಯನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹಾಗೂ ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ವೀಕ್ಷಿಸಿದರು.  

ತಾಲ್ಲೂಕಿನ ಚಿಕ್ಕತೊಗಲೇರಿ ಮತ್ತು ಹಿರೇತೊಗಲೇರಿ ಗ್ರಾಮದಲ್ಲಿ ಮಳೆಯಿಂದ ಹಾನಿಯಾದ ಭತ್ತದ ಬೆಳೆಯನ್ನು ವೀಕ್ಷಿಸಿ ರೈತರ ಅಳಲನ್ನು ಆಲಿಸಲಾಯಿತು. ಈ ವೇಳೆ ತಹಶೀಲ್ದಾರ್ ಅಶ್ವತ್ಥ್‌, ಸಹಾಯಕ ನಿರ್ದೇಶಕ ಕೃಷಿ ಶ್ರೀಧರ್ ಮೂರ್ತಿ ಇತರರು ಉಪಸ್ಥಿತರಿದ್ದರು.