ಪ್ರಜ್ಞಾವಂತ ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಕನ ಪಾತ್ರ ಅಮೂಲ್ಯವಾದದ್ದು

ಪ್ರಜ್ಞಾವಂತ ಪ್ರಜೆಗಳನ್ನು ರೂಪಿಸುವಲ್ಲಿ  ಶಿಕ್ಷಕನ ಪಾತ್ರ ಅಮೂಲ್ಯವಾದದ್ದು

ದಾವಣಗೆರೆ ವಿವಿಯ ಜೈವಿಕ ತಂತ್ರಜ್ಞಾನ ಅಧ್ಯಯನ ವಿಭಾಗದ ಪ್ರಾಧ್ಯಾಪಕ  ಪ್ರೊ. ಎಸ್.ಎಂ. ಗೋಪಿನಾಥ

ದಾವಣಗೆರೆ, ಮೇ 26- ನಗರದ ನೂತನ ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ ಕಾಲೇಜಿನ ಬಿ.ಇಡಿ.ಯ ವಿದ್ಯಾರ್ಥಿ ಸಂಘವನ್ನು ದಾವಣಗೆರೆ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಜೈವಿಕ ತಂತ್ರಜ್ಞಾನ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಎಸ್‌.ಎಂ. ಗೋಪಿನಾಥ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಶಿಕ್ಷಕರ ವೃತ್ತಿ ಅತ್ಯಂತ ಜವಾಬ್ದಾರಿಯುತ ಕೆಲಸ. ಸಮಾಜದ ವ್ಯಕ್ತಿಗಳನ್ನು ರೂಪಿಸುವಲ್ಲಿ, ಪ್ರಜ್ಞಾವಂತ ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಾಗಿರುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿ – ಶಿಕ್ಷಕರು ಚೆನ್ನಾಗಿ ಕಲಿತಾಗ ಮಾತ್ರ ನೀವು ಇತರರಿಗೆ ಕಲಿಸಲು ಸಾಧ್ಯ ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನೂತನ ವಿದ್ಯಾಸಂಸ್ಥೆಯ ಅಧ್ಯಕ್ಷ ಎನ್.ಪರಶುರಾಮನಗೌಡ ಮಾತನಾಡಿ, ಶಿಕ್ಷಕ ವೃತ್ತಿಯಲ್ಲಿ ಸಿಕ್ಕಂತಹ ನೆಮ್ಮದಿ ಬೇರೆ ಯಾವ ವೃತ್ತಿಯಲ್ಲಿ ಸಿಗುವುದಿಲ್ಲ. ವೃತ್ತಿ ಜೀವನಕ್ಕೆ ಬೇಕಾದ ಎಲ್ಲಾ ಅವಕಾಶಗಳನ್ನು ಕಲ್ಪಿಸುವ ಸಂಘವೇ ವಿದ್ಯಾರ್ಥಿ ಸಂಘ ಎಂದರು. ಉತ್ತಮ ಶಿಕ್ಷಕನಾಗಬೇಕಾದರೆ ಅಧ್ಯಯನಶೀಲರಾಗಿರಬೇಕು ಹಾಗೂ ಜ್ಞಾನ ಸ್ಫೋಟಕವಾಗುವಂತಹ ಈ ಯುಗದಲ್ಲಿ ಶಿಕ್ಷಕರ ಪರಿಶ್ರಮವೂ ಎಷ್ಟಿದ್ದರೂ ಸಾಲದು ಎಂದು ತಿಳಿಸಿದರು.

ಕಾಲೇಜಿನ ಪ್ರಾಚಾರ್ಯ ಡಾ. ಕೆ.ಎಸ್. ದಿವಾಕರ ನಾಯ್ಕ ಅವರು  ಸ್ವಾಗತಿಸಿದರು. 

ನೂತನ ಶಿಕ್ಷಣ ಮಹಾ ವಿದ್ಯಾಲಯದ ಪ್ರಶಿಕ್ಷಣಾರ್ಥಿ ಗಳಾದ ಕು. ಅರ್ಪಿತ ಯೆಮ್ಮಿ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಕಾರ್ಯಕ್ರಮವನ್ನು ಸಹಾಯಕ ಪ್ರಾಧ್ಯಾಪಕರಾದ ಕೆ.ವಿ.ಸುರೇಶ್ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಜಿ.ಹೆಚ್. ಶಶಿ ವಂದಿಸಿದರು.

error: Content is protected !!