ದಾವಣಗೆರೆ, ಜೂ. 8- ಪಾಶ್ಚಿಮಾತ್ಯ ಸಂಸ್ಕೃತಿ ಯೇ ಖುಷಿ ಎಂದುಕೊಂಡಿದ್ದೇವೆ. ಆದರೆ ನಿಜವಾದ ಖುಷಿ ನಮ್ಮ ಭಾರತೀಯ ಸಂಸ್ಕೃತಿಯಲ್ಲಿದೆ ಎಂದು ಬಿ.ಎಸ್. ಚನ್ನಬಸಪ್ಪ ಕಾಲೇಜಿನ ಅಧ್ಯಕ್ಷ ಬಿ.ಸಿ ಶಿವಕುಮಾರ್ ಹೇಳಿದರು.
ನಗರದ ಬಿ.ಎಸ್.ಚನ್ನಬಸಪ್ಪ ಕಾಲೇಜಿನಲ್ಲಿ ನಮ್ಮ ಪರಂಪರೆ-2023ರ ಹೆಸರಿನಲ್ಲಿ ನಿನ್ನೆ ಹಮ್ಮಿಕೊಳ್ಳಲಾಗಿದ್ದ ಎತ್ನಿಕ್ ಡೇ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಉಡುಗೆಗಳನ್ನು ತೊಟ್ಟು ಸಂಭ್ರಮಿಸುವ ದಿನವನ್ನು ಎತ್ನಿಕ್ ಡೇ ಎಂಬ ಹೆಸರಿನಲ್ಲಿ ನಮ್ಮ ಕಾಲೇಜಿನಲ್ಲಿ ಆಚರಿಸಲಾಗುತ್ತಿದೆ. ಈ ಸಂಭ್ರಮವನ್ನು ನಮ್ಮ ಜೀವನದಲ್ಲಿ ದಿನವೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ನಾವು ಪಾಶ್ಚಾತ್ಯ ಸಂಸ್ಕೃತಿಯೇ ಖುಷಿ ಎಂದು ಕೊಂಡಿದ್ದೆವು. ಆದರೆ ನಿಜವಾದ ಖುಷಿ ಭಾರತೀಯ ಸಂಸ್ಕೃತಿಯಲ್ಲಿ ಇದೆ. ವಿದ್ಯಾರ್ಥಿಗಳಿಗೆ ಮನದಟ್ಟು ಮಾಡುವ ಉದ್ದೇಶದಿಂದ ಇಂತಹ ಕಾರ್ಯಕ್ರಮ ಗಳನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳುವುದು ಒಳ್ಳೆಯದು ಎಂದರು.
ಕಾಲೇಜಿನ ಪ್ರಾಂಶುಪಾಲ ಗುರು ಎಂ.ಸಿ ಅವರು ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ವೈವಿಧ್ಯತೆ ಸಾಕಷ್ಟಿದೆ. ಇದರಲ್ಲಿ ನಾವು ಯಶಸ್ಸನ್ನು ಸಾಧಿಸ ಬಹುದು. ಇಂತಹ ಸಂಸ್ಕೃತಿಯನ್ನು ನಾವು ಒಂದೇ ದಿನಕ್ಕೆ ಸೀಮಿತಗೊಳಿಸದೆ ನಮ್ಮ ಜೀವನ ಪರ್ಯಂತ ಅಳವಡಿಸಿಕೊಂಡು ಉಳಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು.
ರಂಗು ರಂಗಿನ ಉಡುಗೆಗಳನ್ನು ತೊಟ್ಟು ಬಂದಿದ್ದ ಕಾಲೇಜಿನ ಯುವಕ, ಯವತಿಯರು ಕಾಲೇಜಿನ ಆವರಣದಲ್ಲಿ ಬಿಸಿಲನ್ನೂ ಲೆಕ್ಕಸದೆ ಕನ್ನಡ ಹಾಡುಗಳಿಗೆ ಹೆಜ್ಜೆ ಹಾಕುತ್ತಾ ತಮ್ಮ ಗೆಳೆಯರೊಡನೆ ಸೆಲ್ಛಿ ಕ್ಲಿಕ್ಕಿಸಿಕೊಂಡರು.