ಕೆಎಸ್ಸಾರ್ಟಿಸಿ ಮಿನಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಶಾಸಕ ದೇವೇಂದ್ರಪ್ಪ ಚಾಲನೆ
ಜಗಳೂರು, ಜೂ.11- ಪಟ್ಟಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಡಿಪೋ ನಿರ್ಮಾಣಕ್ಕೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಭರವಸೆ ನೀಡಿದರು.
ಪಟ್ಟಣದ ಕೆಎಸ್‌ಆರ್‌ಟಿಸಿ ಮಿನಿ ಬಸ್ ನಿಲ್ದಾಣದ ಬಳಿ ಮಹಿಳೆಯರಿಗೆ ಉಚಿತ ಪ್ರಯಾಣ “ಶಕ್ತಿ ಯೋಜನೆಗೆ” ಚಾಲನೆ ನೀಡಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗ್ರಾಮೀಣ ಭಾಗದಿಂದ ಸಮರ್ಪಕವಾಗಿ ಸರ್ಕಾರಿ ಬಸ್‌ಗಳಿ ಲ್ಲದೇ ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಕೆಎಸ್‌ಆರ್‌ಟಿಸಿ ಡಿಪೋ ಅಗತ್ಯವಿದೆ. ಅಲ್ಲದೆ ತಾತ್ಕಾಲಿಕವಾಗಿ ಜಗಳೂರಿನಿಂದ ಬೆಂಗಳೂರಿಗೆ ಶೀಘ್ರ ಪ್ರತ್ಯೇಕ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಒದಗಿಸಲಾಗುವುದು ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ. ಇದರಿಂದ ಮಹಿಳೆಯರು ರಾಜ್ಯದಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದ್ದು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಸಗೋಡು ಜಯಸಿಂಹ, ಕೆಪಿಸಿಸಿ ಎಸ್‌ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ. ಪಾಲಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್, ತಹಶೀಲ್ದಾರ್ ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಹೇಶ್ವರಪ್ಪ, ಸಿಪಿಐ ಶ್ರೀನಿವಾಸ್, ಪ.ಪಂ ಸದಸ್ಯರಾದ ರವಿಕುಮಾರ್, ರಮೇಶ್, ಶಕೀಲ್ ಅಹಮ್ಮದ್, ದಾವಣಗೆರೆ ಕೆಎಸ್‌ಆರ್‌ಟಿಸಿ ಘಟಕ-2 ರ ವ್ಯವಸ್ಥಾಪಕ ಮರುಳಸಿದ್ದಪ್ಪ, ಸಹಾಯಕ ಸಂಚಾರ ನಿರೀಕ್ಷಕ ಅಬ್ದುಲ್ ರಜಾಕ್ ಇದ್ದರು.