ಧೃತಿಗೆಡದೆ ಲೋಕಸಭಾ ಚುನಾವಣೆಗೆ ಸಿದ್ಧರಾಗಿ

ಧೃತಿಗೆಡದೆ ಲೋಕಸಭಾ ಚುನಾವಣೆಗೆ ಸಿದ್ಧರಾಗಿ

ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕರ್ತರಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಕರೆ

ದಾವಣಗೆರೆ, ಜೂ. 13- ವಿಧಾನಸಭಾ ಚುನಾವಣೆಯ ಸೋಲಿನಿಂದ ಧೃತಿಗೆಡದೆ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸುವಂತೆ ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಮಂಗಳವಾರ ಇಲ್ಲಿನ ದಾವಣಗೆರೆ-ಹರಿಹರ ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಮುಂಬರುವ ತಾಲ್ಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಬೇಕಿದೆ. ನಂತರ ಬರಲಿರುವ ಲೋಕಸಭಾ ಚುನಾವಣೆಯಲ್ಲಿಯೂ ಕ್ಷೇತ್ರವನ್ನು ಗೆಲ್ಲಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲ ಪಡಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ  ಕೆ.ಎಸ್. ನವೀನ್, ಪಕ್ಷದ ಮುಂದಿನ ಕಾರ್ಯ ಯೋಜನೆ ಬಗ್ಗೆ ವಿವರಿಸಿದರು. 

ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಹರಿಹರ ಕ್ಷೇತ್ರದ ಶಾಸಕ  ಬಿ.ಪಿ. ಹರೀಶ್, ಮಾಜಿ ಶಾಸಕರಾದ ಎಸ್.ಎ. ರವೀಂದ್ರನಾಥ್, ಎಸ್.ವಿ. ರಾಮಚಂದ್ರ, ಮಾಜಿ ವಿಧಾನ ಪರಿಷತ್ ಸದಸ್ಯ
ಡಾ|| ಎ.ಹೆಚ್. ಶಿವಯೋಗಿಸ್ವಾಮಿ, ಜಿಲ್ಲಾ ಸಹ ಸಂಚಾಲಕ  ಶಿವಲಿಂಗಪ್ಪ, ಮುಖಂಡ ಯಶವಂತರಾವ್ ಜಾಧವ್, ಹೆಚ್.ಎಸ್. ಶಿವಕುಮಾರ್, ಬಿ.ಜಿ. ಅಜಯ್‍ಕುಮಾರ್, ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಇತರರು ಉಪಸ್ಥಿತರಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗರಾಜ್ ಸೊಕ್ಕೆ ಸ್ವಾಗತಿಸಿದರು. ಮಂಜಾನಾಯ್ಕ ನಿರೂಪಿಸಿದರು. ಶಾಂತರಾಜ್ ಪಾಟೀಲ್ ವಂದಿಸಿದರು.

error: Content is protected !!