ಬಿಜೆಪಿಯಿಂದ ದ್ವೇಷದ ರಾಜಕಾರಣ

ಬಿಜೆಪಿಯಿಂದ ದ್ವೇಷದ ರಾಜಕಾರಣ

ಜಿಲ್ಲಾ ಕಾಂಗ್ರೆಸ್‌ನಿಂದ ಪಾಲಿಕೆ ಮುಂಭಾಗ ಮೌನ ಸತ್ಯಾಗ್ರಹ

ದಾವಣಗೆರೆ, ಜು. 12- ಕೇಂದ್ರದ ಬಿಜೆಪಿ ಸರ್ಕಾರ ನ್ಯಾಯಾಂಗ ವ್ಯವಸ್ಥೆಯನ್ನು ಬಳಸಿಕೊಂಡು ರಾಹುಲ್‌ಗಾಂಧಿ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಹಾನಗರ ಪಾಲಿಕೆ ಮುಂಭಾಗ ಮೌನ ಸತ್ಯಾಗ್ರಹ ನಡೆಸಲಾಯಿತು.

ಇದೇ ವೇಳೆ ಸತ್ಯಾಗ್ರಹದ ನೇತೃತ್ವ ವಹಿಸಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಬಿ. ಮಂಜಪ್ಪ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮಾನಸಿಕ ಕಿರು ಕುಳ ನೀಡುವ ಮೂಲಕ ದ್ವೇಷದ ರಾಜ ಕಾರಣ ಮಾಡುತ್ತಿದ್ದಾರೆಂದು ಆರೋಪಿಸಿದರು.

ರಾಜಕೀಯ ಪ್ರಭಾವದಿಂದ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಸ್ಥಾನದಿಂದ ಕೆಳಗಿಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಇದನ್ನು ವಿರೋಧಿಸಿ ಇಂದು ದೇಶಾದ್ಯಂತ ಹಾಗೂ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಹುಲ್ ಬೆಂಬಲಿಸಿ ಸತ್ಯಾ ಗ್ರಹ ನಡೆಸಲಾಗುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ದಾವಣಗೆರೆಯಲ್ಲೂ ಸಹ   ಎಂದರು.

ಬಿಜೆಪಿ ಸರ್ಕಾರ  ದೇಶದ ಜನರಿಗೆ ಸಾಕಷ್ಟು ಭರವಸೆಗಳನ್ನು ನೀಡಿದ್ದು, 100 ದಿನ ಕಾಲಾವಕಾಶ ನೀಡಿದರೆ ಇಡೀ ದೇಶದ ಚಿತ್ರಣವನ್ನೇ ಬದಲಿಸುತ್ತೇವೆ ಎಂದು ನೀಡಿದ ಹೇಳಿಕೆ ಹುಸಿಯಾಗಿದೆ. ಯಾವುದೇ ಬದಲಾವಣೆ ಸಹ ಆಗಿಲ್ಲ. ದೇಶದಲ್ಲಿನ ನಿರುದ್ಯೋಗಿ ಯುವಕರಿಗೆ ಉದ್ಯೋಗ ಸಹ ನೀಡಲಾಗಿಲ್ಲ ಎಂದು ದೂರಿದರು.

ವಿದೇಶದಲ್ಲಿರುವ ಕಪ್ಪು ಹಣ ತಂದು ದೇಶದಲ್ಲಿರುವ ಪ್ರತಿಯೊಬ್ಬ ಪ್ರಜೆಯ ಬ್ಯಾಂಕ್ ಖಾತೆಗೆ ಸಂದಾಯ ಮಾಡುತ್ತೇವೆ ಎಂದು ತಿಳಿಸಿದ್ದರು. ಆದರೆ ಯಾವುದೇ ಆಶ್ವಾಸನೆ ಪೂರೈಸಿಲ್ಲ ಎಂದರು.

ರಾಹುಲ್ ಗಾಂಧಿ ಮೇಲಿನ ದ್ವೇಷದ ರಾಜಕಾರಣವನ್ನು ಕೈಬಿಡಬೇಕೆಂದು ಮಂಜಪ್ಪ ಮನವಿ ಮಾಡಿದರು.

ಮೌನ ಸತ್ಯಾಗ್ರಹದಲ್ಲಿ ಮಹಾನಗರ ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ಮುಖಂಡರಾದ ಮುದೇಗೌಡ್ರು ಗಿರೀಶ್, ಕೆ.ಜಿ. ಶಿವಕುಮಾರ್, ಎಸ್. ಮಲ್ಲಿಕಾರ್ಜುನ್, ಅಯೂಬ್ ಪೈಲ್ವಾನ್, ಎ. ನಾಗರಾಜ್, ಗಡಿಗುಡಾಳ್ ಮಂಜುನಾಥ್, ಅನಿತಾಬಾಯಿ ಮಾಲತೇಶರಾವ್ ಜಾಧವ್, ಎ.ಬಿ. ರಹೀಂಸಾಬ್ ಮತ್ತಿತರರು ಪಾಲ್ಗೊಂಡಿದ್ದರು.

error: Content is protected !!