ಜೀವ ರಕ್ಷಣೆಯಲ್ಲಿ ಅನುಸರಿಸಬೇಕಾದ ಪ್ರಾಥಮಿಕ ಚಿಕಿತ್ಸಾ ವಿಧಾನ, ಕೌಶಲ್ಯ

ಜೀವ ರಕ್ಷಣೆಯಲ್ಲಿ ಅನುಸರಿಸಬೇಕಾದ ಪ್ರಾಥಮಿಕ ಚಿಕಿತ್ಸಾ ವಿಧಾನ, ಕೌಶಲ್ಯ

ದಾವಣಗೆರೆ, ಜು. 17- ಜೀವಗಳ ರಕ್ಷಣೆಯಲ್ಲಿ ಅನುಸರಿಸಬೇಕಾದ ಪ್ರಾಥಮಿಕ ಚಿಕಿತ್ಸಾ ವಿಧಾನ ಹಾಗೂ ಕೌಶಲ್ಯಗಳನ್ನು ಕಲಿಯಲು ಈ ಕಾರ್ಯಾಗಾರ ತುಂಬಾ ಸಹಕಾರಿಯಾಗಿದೆ ಎಂದು ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ.ಬಿ.ಎಸ್. ಪ್ರಸಾದ್ ಹೇಳಿದರು.

ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ಸಹಯೋಗದೊಂದಿಗೆ ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಕಿರಿಯ ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಹೃದಯಾಘಾತ, ಹೃದಯಸ್ತಂಭನ ಹಾಗೂ ಇತರೆ ತೀವ್ರ ತರಹದ ಆರೋಗ್ಯ ಪರಿಸ್ಥಿತಿಯ ತುರ್ತು ಚಿಕಿತ್ಸಾ ಸಂದರ್ಭದಲ್ಲಿ ಅನುಸರಿಸಬೇಕಾದ ಪ್ರಾಥಮಿಕ ಚಿಕಿತ್ಸಾ ವಿಧಾನ ಹಾಗೂ ಕೌಶಲ್ಯಗಳನ್ನು ಕಲಿಯಲು ಕಾರ್ಯಾಗಾರ ಸಹಕಾರಿಯಾಗಿದೆ ಎಂದರು.

ತುರ್ತು ವೈದ್ಯಕೀಯ ಸಂದರ್ಭದಲ್ಲಿ ಮೊದಲ ಒಂದು ಗಂಟೆ ಚಿಕಿತ್ಸಾ ದೃಷ್ಟಿಯಿಂದ ತುಂಬಾ ಮುಖ್ಯವಾಗಿದ್ದು, ಆಸ್ಪತ್ರೆ ಒಳಗೆ ಹಾಗೂ ಹೊರಗಡೆ ಅನುಸರಿಸಬೇಕಾದ ಚಿಕಿತ್ಸಾ ವಿಧಾನಗಳ ಬಗ್ಗೆ ಕಲಿಯಲು ಇಂತಹ ಕಾರ್ಯಾಗಾರಗಳು ಅವಶ್ಯ ಎಂದು ಹೇಳಿದರು.

ವೈದ್ಯಕೀಯ ನಿರ್ದೇಶಕ ಡಾ. ಅರುಣ ಕುಮಾರ್ ಅಜ್ಜಪ್ಪ ಮಾತನಾಡಿ, ಒತ್ತಡ ಪೂರಿತ ಜೀವನ ಶೈಲಿಯಿಂದಾಗಿ ಮನುಷ್ಯನ ಆರೋಗ್ಯದ ಮೇಲೆ ವಿಪರೀತ ತೊಂದರೆಗಳು ಉಂಟಾಗುತ್ತಿವೆ. ಎಷ್ಟೋ ಸಂದರ್ಭಗಳಲ್ಲಿ ಜೀವ ಹಾನಿಯಾದ ಉದಾಹರಣೆಗಳು ನಮ್ಮ ಕಣ್ಮುಂದೆ ಇವೆ.  ಹಾಗಾಗಿ ಕಿರಿಯ ವೈದ್ಯರ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ವೈದ್ಯರು ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡು ರೋಗಿಗಳಿಗೆ ಇನ್ನೂ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಬೇಕೆಂದು ಕರೆ ನೀಡಿದರು.

ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಎಸ್.ಎಸ್. ನರೇಂದ್ರ, ಡಾ.ಸಿ.ಎನ್. ದಿಲೀಪ್ ನೇತೃತ್ವದಲ್ಲಿ ಬೆಂಗಳೂರಿನ ತಜ್ಞ ವೈದ್ಯರಾದ ಡಾ. ಸಿ.ಎನ್. ಯಶವಂತ್, ಡಾ.ಬಿ.ಎಸ್. ಗಣೇಶ್, ಕೇರಳದ ಸಂಯೋಜಕ ಅಶ್ವಿನ್ ಮತ್ತಿತರರು ಭಾಗವಹಿಸಿದ್ದರು. 

error: Content is protected !!