ಕಾನೂನು ಸಾಕ್ಷರತಾ ಅರಿವು ಜಾಥಾಕ್ಕೆ ಚಾಲನೆ ನೀಡಿದ ನ್ಯಾ.ರಾಜೇಶ್ವರಿ ಎನ್.ಹೆಗಡೆ ಅಭಿಮತ
ದಾವಣಗೆರೆ, ನ.9- ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆಯ ಅಂಗವಾಗಿ ಕಾನೂನು ಸಾಕ್ಷರತಾ ಅರಿವು ಬೃಹತ್ ಜಾಥಾ ಕಾರ್ಯಕ್ರಮವನ್ನು ಗುರುವಾರ ನಗರದ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸರ್ಕಾರಿ ಹೈಸ್ಕೂಲ್ ಮೈದಾನದಿಂದ ನಾಲ್ಕು ಭಾಗಗಳಾಗಿ ಜಾಥಾ ಪ್ರಾರಂಭವಾಗಿ ನಗರದಲ್ಲಿ ಪಥ ಸಂಚಲನ ಮಾಡಿತು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್ ಹೆಗಡೆ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಸಮಾಜದ ದುರ್ಬಲ ವರ್ಗದವರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ, ಮಹಿಳೆ ಯರಿಗೆ, ವಿಕಲಚೇತನರಿಗೆ ಕಾನೂನು ಅರಿವಿನ ಮೂಲಕ ಉಚಿತ ಕಾನೂನು ಸಹಾಯ ಬೆಂಬಲವನ್ನು ಒದಗಿಸುವುದು ಕಾನೂನು ಸೇವಾ ದಿನಾಚ ರಣೆಯ ಮುಖ್ಯ ಉದ್ದೇಶವಾಗಿದೆ ಎಂದರು. ಕಾನೂನು ಸೇವೆಗಳ ಪ್ರಾಧಿಕಾರದ ಕಾಯ್ದೆ ಯನ್ನು 9ನೇ ನವೆಂಬರ್ 1995ರಂದು ಜಾರಿಗೆ ತರಲಾಯಿತು. ಈ ಕಾಯ್ದೆಯ ಸ್ಮರಣಾ ರ್ಥವಾಗಿ ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ಪ್ರತಿ ವರ್ಷ ನವೆಂಬರ್ 9 ರಂದು ಆಚರಿಸಲಾಗುತ್ತಿದೆ ಎಂದರು.
ಜನಸಾಮಾನ್ಯರು ಒಂದಲ್ಲಾ ಒಂದು ಕಾನೂನು ಸಮಸ್ಯೆ ಎದುರಿಸಬೇಕಾಗಿ ಬರುವುದು ಸಾಮಾನ್ಯವಾಗಿದೆ. ಇಂತಹ ಸಂದರ್ಭಗಳಲ್ಲಿ ಮುಗ್ಧರು, ದುರ್ಬಲರು ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿರುವ ಜನರು ಶೋಷಣೆಗೆ ಒಳಗಾಗಿ ರುವ ಸಾಧ್ಯತೆ ಹೆಚ್ಚು. ಕಾನೂನು ಸಾಕ್ಷರ ತೆಯು ಶೋಷಣೆಯ ವಿರುದ್ಧ ಹೋರಾಡಲು ಶಕ್ತರಾಗುವಂತೆ ಮಾಡಲು ಇರುವ ಅತ್ಯು ತ್ತಮ ಸಾಧನವಾಗಿದೆ. ಕಾನೂನು ಸಾಕ್ಷರತೆ ಯಿಂದಾಗಿ ಜನ ಸಾಮಾನ್ಯರು ಸಂವಿಧಾನ ಹಾಗೂ ಇತರೆ ಶಾಸನಗಳು ತಮಗೆ ಕೊಡ ಮಾಡಿರುವ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಸಮರ್ಥರಾಗುತ್ತಾರೆ ಎಂದು ತಿಳಿಸಿದರು.
ಪ್ಲಾಸ್ಟಿಕ್ ಮುಕ್ತ ಪರಿಸರ, ಪೋಕ್ಸೋ ಕಾನೂನು ಅರಿವು, ಬಾಲ್ಯ ವಿವಾಹ ನಿಷೇಧ ಕಾನೂನು ಅರಿವು, ಬಾಲ ಕಾರ್ಮಿಕ ಪದ್ಧತಿ ವಿರೋಧ, ರಾಷ್ಟ್ರೀಯ ಸಂಚಾರಿ ನಿಯಮ ಉಲ್ಲಂಘನೆ ಕುರಿತ ಜಾಗೃತಿ ವಿಷಯಗಳ ಅರಿವು ಮೂಡಿಸಲಾಯಿತು. ಜಾಥಾದಲ್ಲಿ ಪಾಲ್ಗೊಂಡ ಎಲ್ಲರಿಗೂ ಪ್ಲಾಸ್ಟಿಕ್ ಮುಕ್ತ ಸಮಾಜಕ್ಕಾಗಿ ಪರಿಸರ ಇಲಾಖೆಯಿಂದ ಬಟ್ಟೆ ಬ್ಯಾಗ್‍ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮ ಕರೆಣ್ಣವರ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅರುಣ್‍ಕುಮಾರ್ ಎಲ್.ಹೆಚ್., ಮಹಾನಗರಪಾಲಿಕೆ ಆಯುಕ್ತೆ ರೇಣುಕ, ಕ್ರೀಡಾ ಮತ್ತು ಯುವಜನ ಅಧಿಕಾರಿ ಜಯಲಕ್ಷ್ಮಿ, ಆರ್.ಎಲ್. ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಯತೀಶ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಅಧಿಕಾರಿ ಡಾ. ಹೆಚ್. ಲಕ್ಷ್ಮೀಕಾಂತ, ಕಾರ್ಮಿಕ ಅಧಿಕಾರಿ ಇಬ್ರಾಹಿಂ, ಲಾ ಕಾಲೇಜು ಉಪನ್ಯಾಸಕರಾದ ವಿದ್ಯಾಧರ ವೇದವರ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕರಿಬಸಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಕೊಟ್ರೇಶ್ ಜೆ., ಸಂಚಾರಿ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ನಲವಾಗಲು ಮಂಜುನಾಥ್, ಡಿ.ಹೆಚ್.ಓ ಡಾ|| ಷಣ್ಮುಖಪ್ಪ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಜಿ.ಕೆ. ಬಸವರಾಜು ಗೋಪನಾಳ್, ಕಾರ್ಯದರ್ಶಿ ಬಸವರಾಜ್ ಎಸ್., ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್ ಸೇರಿದಂತೆ ಎ.ವಿ. ಕಮಲಮ್ಮ ಮಹಿಳಾ ಕಾಲೇಜು, ಸೀತಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆ, ಬಾಲಕರ ಸರ್ಕಾರಿ ಪ್ರೌಢಶಾಲೆ, ಡಿ.ಆರ್.ಎಂ. ಸೈನ್ಸ್ ಕಾಲೇಜು, ಆರ್.ಎಲ್. ಲಾ ಕಾಲೇಜು ಹಾಗೂ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಬೃಹತ್ ಜಾಥಾದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಆರ್.ಎಲ್. ಕಾನೂನು ಮಹಾ ವಿದ್ಯಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಪೊಲೀಸ್ ಇಲಾಖೆ ಹಾಗೂ ವಿವಿಧ ಕಾಲೇಜುಗಳು, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.