ಜಿಲ್ಲೆಯಲ್ಲಿ ಶೀಘ್ರ ಭತ್ತ ಖರೀದಿ ಕೇಂದ್ರ ಆರಂಭಿಸಲು ಆಗ್ರಹ

ಜಿಲ್ಲೆಯಲ್ಲಿ ಶೀಘ್ರ ಭತ್ತ ಖರೀದಿ ಕೇಂದ್ರ ಆರಂಭಿಸಲು ಆಗ್ರಹ

ದಾವಣಗೆರೆ, ನ. 21- ಬರದಿಂದಾಗಿ ಹಳ್ಳಿಗಳಲ್ಲಿ ಜನರು ಭಯಾನಕ  ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂದು ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಕುರುವ ಗಣೇಶಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭತ್ತದ ಬೆಳೆ ಕಟಾವು ಹಂತಕ್ಕೆ ಬಂದಿದೆ.  ರೈಸ್ ಮಿಲ್ ಮಾಲೀ ಕರು ನಷ್ಟದಲ್ಲಿದ್ದಾರೆ. ವರ್ತಕರು  ಭತ್ತ ಖರೀ ದಿಗೆ ಮುಂದೆ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಖರೀದಿ ಕೇಂದ್ರ ಆರಂಭಿಸಿ ರೈತರ ನೆರವಿಗೆ ಧಾವಿ ಸಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಆದೇಶದ ಮೇರೆಗೆ ರೈತರು ಬೆಳೆ ವಿಮೆ ಕಟ್ಟಿದ್ದಾರೆ. ಆದರೆ ಮುಖ್ಯಮಂತ್ರಿಗಳೇ ವಿಮಾ ಕಂಪನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಹಾಗಾದರೆ ಆ ಕಂಪನಿಗಳ ಮೇಲೆ ಏನು ಕ್ರಮ ಕೈಗೊಳ್ಳಲಾಗಿದೆ? ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಬಗ್ಗೆ ಚಿಂತನೆ ನಡೆಸದೆ, ಮುಂದಿನ ಚುನಾ ವಣೆ ಬಗ್ಗೆ ಚಿಂತಿಸುತ್ತಿದ್ದಾರೆ.  ಇದುವರೆಗೂ ರಾಜ್ಯ ಸರ್ಕಾರ ಬರಗಾಲದ ಪರಿಹಾರ ನೀಡಿಲ್ಲ. 1 ತಿಂಗಳೊಳಗೆ ಪರಿಹಾರ ನೀಡಲು ಮುಂದಾಗದಿದ್ದರೆ, ಪ್ರತಿಭಟನಾ ರಾಲಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಸಂಯುಕ್ತ ಕಿಸಾನ್ ಮೋರ್ಚಾ, ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಆಶ್ರಯದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇದೇ ನ.26ರಿಂದ 28ರವರೆಗೆ ಕರೆ ನೀಡಲಾಗಿರುವ ಮಹಾಧರಣಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ  ಕುರುವ ಗಣೇಶಪ್ಪ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು, ರಾಜ್ಯ ಸರ್ಕಾರದ ರೈತ ವಿರೋಧಿ ಕೃಷಿ ಕಾಯ್ದೆಗಳ ರದ್ಧತಿಗಾಗಿ ಪರ್ಯಾಯ ನೀತಿಗಳಿಗಾಗಿ ಒತ್ತಾಯಿಸಿ ಮೂರು ದಿನಗಳ ಮಹಾಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ರಾಜ್ಯ ಉಪಾಧ್ಯಕ್ಷ ಹೊನ್ನೂರು ಮುನಿಯಪ್ಪ ಮಾತನಾಡಿ, ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಮೂಲ ಸೌಕರ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರುಗಳಾದ ಸಂತೋಷ್ ನಾಯ್ಕ, ಅಭಿಲಾಷ್ ಎಂ, ಮಾಯಕೊಂಡದ ಬೀರಪ್ಪ, ಕಣಿವಿ ಬಿಳಚಿ ಅಣ್ಣಪ್ಪ, ಮಲ್ಲೇನಹಳ್ಳಿ ನಾಗರಾಜ್, ಬಿಚೋಗಟ್ಟೆ ಗಣೇಶಪ್ಪ ಇತರರಿದ್ದರು.

error: Content is protected !!