ದೇಶದಲ್ಲಿನ 13 ಕೋಟಿ ಜನರು ಬಡತನ ರೇಖೆಯಿಂದ ಮೇಲಕ್ಕೆ

ದೇಶದಲ್ಲಿನ 13 ಕೋಟಿ ಜನರು ಬಡತನ ರೇಖೆಯಿಂದ ಮೇಲಕ್ಕೆ

ನಿಟುವಳ್ಳಿಯ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಸಂಸದ ಜಿ.ಎಂ ಸಿದ್ದೇಶ್ವರ

ದಾವಣಗೆರೆ,ಜ.10- ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವಾರು ಯೋಜನೆಗಳು ಜನರ ಜೀವನ ಮಟ್ಟವನ್ನು ಸುಧಾರಿಸಿದ್ದು, ದೇಶದ 13 ಕೋಟಿಗೂ ಅಧಿಕ ಜನರು ಬಡತನ ರೇಖೆಯಿಂದ ಹೊರ ಬಂದಿದ್ದಾರೆ. ಎಂದು ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ ಹೇಳಿದರು.

ನಗರದ ನಿಟ್ಟುವಳ್ಳಿಯಲ್ಲಿಂದು ವಿಕಸಿತ ಭಾರತ ಸಂಕಲ್ಪ ಯಾತ್ರೆ  ಕಾರ್ಯಕ್ರಮ  ಉದ್ಘಾಟಿಸಿ  ಮಾತನಾಡಿ, ನಗರ ಪ್ರದೇಶದ ನಿವಾಸಿಗಳಿಗಾಗಿ ಪ್ರಧಾನ ಮಂತ್ರಿ ನಗರ ವಸತಿ ಯೋಜನೆ, ಸ್ವ-ನಿಧಿ, ಸ್ಟಾಂಡ್ ಆಪ್ ಇಂಡಿಯಾ, ಅಮೃತ್ ಯೋಜನೆ, ಪ್ರಧಾನ ಮಂತ್ರಿ ಜನೌಷಧಿ, ಉಜ್ವಲಾ ಸೇರಿದಂತೆ 50 ಕ್ಕೂ ಅಧಿಕ ಯೋಜನೆಗಳ ಪ್ರಯೋಜನ ವನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ಅಲ್ಲದೇ  ಗ್ರಾಮೀಣ ಸೇರಿದಂತೆ ನಗರ, ಪಟ್ಟಣ ಪ್ರದೇಶದಲ್ಲಿ ವಿಶ್ವಕರ್ಮ, ಜನ್‍ಧನ್, ಮುದ್ರಾ, ಆಯುಷ್ಮಾನ್  ಸೇರಿದಂತೆ  70 ಕ್ಕೂ ಹೆಚ್ಚು ಯೋಜನೆ ಗಳನ್ನು ಜನರ ಕಲ್ಯಾಣಕ್ಕಾಗಿ ಜಾರಿಗೆ ತರಲಾಗಿದ್ದು,
ಈ ಎಲ್ಲಾ ಯೋಜನೆಗಳ ಸದುಪಯೋಗವನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗುವಂತೆ ಸಂಸದರು ಕರೆ ನೀಡಿದರು.

ಈ ಯೋಜನೆಗಳಿಗೆ ಸಂಬಂಧಿಸಿದ  ಇಲಾಖೆ ಅಧಿಕಾರಿಗಳು ಸವಲತ್ತುಗಳ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡು ವುದರ ಜೊತೆಗೆ ಯೋಜನೆಯಿಂದ ಹೊರಗೆ ಇರುವಂತಹ ಜನರನ್ನು ಯೋಜನಾ ವ್ಯಾಪ್ತಿಗೆ ತರುವ ಕೆಲಸವನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯ ಸರ್ಕಾರದ ಉಚಿತ ಯೋಜನೆಗಳು ಸರಿಯಾಗಿ ಜನರಿಗೆ ತಲುಪುತ್ತಿಲ್ಲ ಎಂದು ಟೀಕಿಸಿದ ಅವರು, ಕೇಂದ್ರ ಸರ್ಕಾರದ ಹಲವು ಯೋಜನೆಗಳು ನಿಜವಾದ ಮತ್ತು ಅರ್ಹ ಫಲಾನುಭವಿಗಳಿಗೆ ದೊರೆಯುತ್ತಿವೆ. ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳನ್ನು ಪಡೆಯಲು ಯಾರಿಗೂ ಕೂಡ ಹಣವನ್ನು ನೀಡುವ ಅವಶ್ಯಕತೆಯಿಲ್ಲ, ಆದರೆ ಕೆಲವು ಸೇವಾ ಕೇಂದ್ರಗಳಲ್ಲಿ ಜನರಿಂದ ಹಣವನ್ನು ಪಡೆಯುತ್ತಿರುವುದು ಕೇಳಿ ಬಂದಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದರು. 

ಕಾರ್ಯಕ್ರಮದಲ್ಲಿ ಉಜ್ವಲ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಂಸದರು ಸೌಲಭ್ಯಗಳನ್ನು ವಿತರಿಸಿ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿಯವರು ಗೆದ್ದು ಪ್ರಧಾನಿಯಾದರೆ  ದೇಶದ ಚಿತ್ರಣ  ಸಂಪೂರ್ಣ ಬದಲಾಗಲಿದೆ ಎಂದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಕೆ.ಪ್ರಸನ್ನಕುಮಾರ್, ಸದಸ್ಯರಾದ ಶ್ರೀಮತಿ ಉಮಾ ಪ್ರಕಾಶ್, ಕೆ.ಎಂ. ವೀರೇಶ್ ಮತ್ತು ಎಸ್.ಟಿ. ವೀರೇಶ್,   ದೂಡಾ ಮಾಜಿ ಅಧ್ಯಕ್ಷ ಕೆ.ಎಂ. ಸುರೇಶ್ ಹಾಗೂ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಕಾಶ್  ಮತ್ತಿತರರು ಭಾಗವಹಿಸಿದ್ದರು.

error: Content is protected !!