ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಪರೀಕ್ಷೆ

ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಪರೀಕ್ಷೆ

40 ಕೇಂದ್ರಗಳಲ್ಲಿ ನಡೆದ ಪರೀಕ್ಷೆ, 5311 ಅಭ್ಯರ್ಥಿಗಳು ಗೈರು

ದಾವಣಗೆರೆ, ಜ. 28- ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಲಿಖಿತ ಪರೀಕ್ಷೆ ಭಾನುವಾರ ನಗರದ  40 ಕೇಂದ್ರಗಳಲ್ಲಿ ನಡೆಯಿತು. 

ನೋಂದಾಯಿಸಿಕೊಂಡಿದ್ದ 15,000 ಅಭ್ಯರ್ಥಿಗಳ ಪೈಕಿ 9,689 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 5,311 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ. ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಎಂ. ಸಂತೋಷ್, ಮಂಜುನಾಥ್ ಅವರುಗಳೂ ಸಹ  ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

error: Content is protected !!