`ಕರ್ನಾಟಕ ಸಾಂಸ್ಕೃತಿಕ ನಾಯಕ’ ಬಸವಣ್ಣ ಭಾವಚಿತ್ರ ಅಳವಡಿಕೆಗೆ ಕರೆ

`ಕರ್ನಾಟಕ ಸಾಂಸ್ಕೃತಿಕ ನಾಯಕ’ ಬಸವಣ್ಣ ಭಾವಚಿತ್ರ ಅಳವಡಿಕೆಗೆ ಕರೆ

ದಾವಣಗೆರೆ, ಫೆ. 15- `ಕರ್ನಾಟಕ ಸಾಂಸ್ಕೃತಿಕ ನಾಯಕ’ರಾದ ಜಗಜ್ಯೋತಿ ಬಸವಣ್ಣ ನವರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಇಲಾಖೆಗಳು ತಮ್ಮ ವ್ಯಾಪ್ತಿಯ ಅಧೀನ ಕಚೇರಿ ಗಳಲ್ಲಿ ಅನಾವರಣ ಗೊಳಿಸಲು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಸೂಚನೆ ನೀಡಿದ್ದಾರೆ. 

ಜಗಜ್ಯೋತಿ ಬಸವೇಶ್ವರರು ಸಾರ್ವತ್ರಿಕ ಮತ್ತು ಸಾರ್ವಕಾಲಿಕ ಸರ್ವಜನ ಸಮಭಾವದ ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಯನ್ನು ಬೋಧಿಸಿರುವು ದರಿಂದ ನಮ್ಮ ದೇಶದ ಸಂವಿಧಾನದ ಆಶಯಗಳಿಗೆ ಅವರ ಚಿಂತನೆಗಳು ಸಾಂಸ್ಕೃತಿಕ ರಾಯಭಾರತ್ವಕ್ಕೆ ಸಮರ್ಥನೀಯವಾದ ನೆಲೆ ಒದಗಿಸಿರುವ ಮೇರೆಗೆ ಉಲ್ಲೇಖಿತ ಆದೇಶದಲ್ಲಿ ಬಸವಣ್ಣನವರ ಭಾವಚಿತ್ರವನ್ನು ಮುಖ್ಯಮಂತ್ರಿಗಳು ಈಗಾಗಲೇ ಬೆಂಗಳೂರು ವಿಧಾನಸೌಧದಲ್ಲಿ ಫೆ.13 ರಂದು ಅನಾವರಣಗೊಳಿಸಿದ್ದು, ನಾಡಿದ್ದು ದಿನಾಂಕ 17 ರಂದು ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ, ತಾಲ್ಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಅನಾವರಣಗೊಳಿಸುವ ಭಾವಚಿತ್ರಗಳಲ್ಲಿ `ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ’ ಎಂಬ ಅಡಿ ಬರಹ ಮುದ್ರಿಸಿ ಅಳವಡಿಸಲು ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಭಾವಚಿತ್ರದ ಡಿಜಿಟಲ್ ಪ್ರತಿಯನ್ನು ವೆಬ್‌ಸೈಟ್ http://kannadasiri.karnataka.Gov.in ರಿಂದ ಡೌನ್‌ಲೋಡ್ ಮಾಡಿಕೊಳ್ಳಲು  ಸೂಚನೆ ನೀಡಿದ್ದಾರೆ. 

error: Content is protected !!