ಸವಿತಾ ತತ್ವಾದರ್ಶ ಸಮಾಜಕ್ಕೆ ಮಾದರಿ

ಸವಿತಾ ತತ್ವಾದರ್ಶ ಸಮಾಜಕ್ಕೆ ಮಾದರಿ

ದಾವಣಗೆರೆ, ಫೆ. 16 – ಸರ್ಕಾರ ಮಹನೀಯರ ಜಯಂತಿಗಳನ್ನು ಆಚರಿಸುತ್ತಿದ್ದು, ಇದು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಲ್ಲ, ಇವರ ತತ್ವಾದರ್ಶಗಳು ಸಮಾಜಕ್ಕೆ ಮಾದರಿ ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ್ ತಿಳಿಸಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಸವಿತಾ ಸಮಾಜ, ಇವರ ಸಂಯುಕ್ತ ಆಶ್ರಯದಲ್ಲಿ ಕೊಂಡಜ್ಜಿ ರಸ್ತೆಯ ಸವಿತಾ ಮಹರ್ಷಿ ಸಮುದಾಯ ಭವನದಲ್ಲಿ ಇಂದು ನಡೆದ ಸವಿತಾ ಮಹರ್ಷಿ ಜಯಂತ್ಯೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದಿಂದ ಆಚರಿಸಲಾಗುತ್ತಿರುವ ಮಹನೀಯರು ಸಮಾಜಕ್ಕೆ ಒಂದಲ್ಲ, ಒಂದು ಅತ್ಯುತ್ತಮವಾದ ಸಂದೇಶ  ನೀಡಿದ್ದಾರೆ. ಆ ಮೂಲಕ ಸಮಾಜದ ಅಭ್ಯುದಯಕ್ಕೆ ಶ್ರಮಿಸಿದ್ದು ಸಮಾಜದ ಸಾಮರಸ್ಯ ಕಾಪಾಡಿಕೊಂಡು ನಾವೆಲ್ಲರೂ ಮುನ್ನಡೆಯಬೇಕಾಗಿದೆ.

ಜಿಲ್ಲಾ ಸವಿತಾ ಸಮುದಾಯದ ಅಧ್ಯಕ್ಷ ಬಿ. ಬಾಲರಾಜ್ ಉಪ್ಪಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸವಿತಾ ಸಮಾಜದ ತಾಲ್ಲೂಕು ಅಧ್ಯಕ್ಷ ರಂಗಸ್ವಾಮಿ ಉಪನ್ಯಾಸ ನೀಡಿದರು. ಜಿಲ್ಲಾ ಸವಿತಾ ಸಮಾಜದ ಉಪಾಧ್ಯಕ್ಷ ಬಿ.ವಿ ಗಂಗಾಧರ್, ತಾಲ್ಲೂಕು ಸವಿತಾ ಸಮಾಜದ ಉಪಾಧ್ಯಕ್ಷ ಕೇಶವಮೂರ್ತಿ, ಕಾರ್ಯದರ್ಶಿ ಜಿ.ಸಿ. ಪರಶುರಾಮ್, ಖಜಾಂಚಿ ಆರ್. ಕರಿಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಹಾಗೂ ಇನ್ನಿತರರು ಉಪಸ್ಥಿತರಿದ್ದರು. 

error: Content is protected !!