ದಾವಣಗೆರೆ, ಫೆ.18 – ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಪೊಲೀಸ್ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಅವರ ಮೇಲಾಗುವ ಘಟನೆಗಳನ್ನು ತಡೆಯಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯ ದಲ್ಲಿ ತುಂಗಭದ್ರಾ ಸಭಾಂಗಣದಲ್ಲಿ ನಿನ್ನೆ ಏರ್ಪ ಡಿಸಲಾದ ಪೋಕ್ಸೋ ಕಾನೂನು, ಬಾಲ್ಯ ವಿವಾಹ ತಡೆ ಕಾಯ್ದೆ ಮತ್ತು ಬಾಲನ್ಯಾಯ ವಿಷಯಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಏರ್ಪಡಿಸಿದ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ್, ಹಿರಿಯ ಸಿವಿಲ್ ನ್ಯಾಯಾಧೀಶೆ ಹೆಚ್.ಕೆ. ರೇಷ್ಮ, ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ವಾಸಂತಿ ಉಪ್ಪಾರ್ ಮತ್ತಿತರರು ಉಪಸ್ಥಿತರಿದ್ದರು.