ಮಾ.1ರಿಂದ ಪಿಯುಸಿ ಪರೀಕ್ಷೆ : ಪಾರದರ್ಶಕಕ್ಕೆ ಡಿಸಿ ನಿರ್ದೇಶನ

ಮಾ.1ರಿಂದ ಪಿಯುಸಿ ಪರೀಕ್ಷೆ : ಪಾರದರ್ಶಕಕ್ಕೆ ಡಿಸಿ ನಿರ್ದೇಶನ

ದಾವಣಗೆರೆ, ಫೆ. 27- ಬರುವ ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು,  ಯಾವುದೇ ರೀತಿಯ ಅಕ್ರಮಕ್ಕೆ ಅವಕಾಶ ನೀಡದೆ ಪಾರದರ್ಶಕ, ನಿಷ್ಪಕ್ಷಪಾತ ಮತ್ತು ಸುಸೂತ್ರವಾಗಿ ಪರೀಕ್ಷೆ ನಡೆಸಲು ಎಲ್ಲಾ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ.ವಿ ವೆಂಕಟೇಶ್ ತಿಳಿಸಿದರು. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜರುಗಿದ ಪರೀಕ್ಷಾ ಪೂರ್ವ ಸಿದ್ದತೆ ಕುರಿತು ಏರ್ಪಡಿಸಲಾದ ಸಭೆಯ  ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಾರ್ಷಿಕ ಪರೀಕ್ಷೆಯಲ್ಲಿ ಕೈಗೊಳ್ಳ ಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ   ಪರೀಕ್ಷೆ ನಡೆಯುವ  ಕೇಂದ್ರ ಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಕೊರತೆ ಇಲ್ಲದೆ ಪರೀಕ್ಷೆ ಬರೆಯಲು ಆಸನದ ವ್ಯವಸ್ಥೆ, ನೀರು, ಗಾಳಿ, ಬೆಳಕಿನ ವ್ಯವಸ್ಥೆಯನ್ನು ಸರಿಯಾಗಿ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಆತಂಕವಿಲ್ಲದೆ ಪರೀಕ್ಷೆಯನ್ನು ಬರೆ ಯಲು ಎಲ್ಲಾ ಪೂರಕ ವಾತಾವರಣ ಕಲ್ಪಿಸಬೇಕೆಂದು ಸೂಚನೆ ನೀಡಿದರು. 

ಮಾರ್ಚ್ 1 ರಿಂದ ಪರೀಕ್ಷೆ ಆರಂಭವಾಗಿ ಮಾರ್ಚ್ 22 ರ ವರೆಗೆ ನಡೆಯಲಿದೆ.   ದಾವಣಗೆರೆ ತಾಲ್ಲೂಕಿನಲ್ಲಿ 18 ಕೇಂದ್ರಗಳು, ಹರಿಹರ 4, ಜಗಳೂರು 3, ಚನ್ನಗಿರಿ  5, ಹೊನ್ನಾಳಿ 3 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಒಟ್ಟು 33 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಕೇಂದ್ರಗಳಲ್ಲಿ 21088 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಹೊಸ ವಿದ್ಯಾರ್ಥಿಗಳು 19644. ಪುನರಾವರ್ತಿತ ವಿದ್ಯಾರ್ಥಿಗಳ ಸಂಖ್ಯೆ 422. ಖಾಸಗಿ ವಿದ್ಯಾರ್ಥಿಗಳ ಸಂಖ್ಯೆ 1022. ಒಟ್ಟಾರೆ ಪರೀಕ್ಷೆ ಬರೆಯುವವರಲ್ಲಿ 9980 ಗಂಡು, 11108 ಹೆಣ್ಣು ಮಕ್ಕಳು ಇದ್ದಾರೆ. ಪರೀಕ್ಷಾ ಕೇಂದ್ರದೊಳಗೆ ಕರ್ತವ್ಯ ನಿರತ ಸಿಬ್ಬಂದಿ ಹೊರತುಪಡಿಸಿ ಇತರೆ ಯಾರಿಗೂ ಪ್ರವೇಶ ಇರುವುದಿಲ್ಲ ಎಂದರು. 

ನಿಷೇಧಾಜ್ಞೆ :  ಜಿಲ್ಲೆಯ  33 ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ 144ನೇ ಸೆಕ್ಷನ್ ಜಾರಿಗೊಳಿಸಿ ನಿಷೇ ಧಾಜ್ಞೆ ಜಾರಿಗೊಳಿಸಲಾಗುತ್ತಿದ್ದು, ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಅಗತ್ಯ ಕ್ರಮ ವಹಿಸಲಾಗುವುದು.

ಅಪರ ಜಿಲ್ಲಾಧಿಕಾರಿ ಸೈಯ್ಯದಾ ಅಫ್ರಿನ್ ಭಾನು ಎಸ್.ಬಳ್ಳಾರಿ ಮಾತನಾಡಿ, ಹರಿಹರ ಕ್ಷೇತ್ರ ಶಿಕ್ಷಣಾಧಿಕಾರಿ ಸಭೆಗೆ ಗೈರಾಗಿದ್ದು ಅವರಿಗೆ ನೋಟಿಸ್ ನೀಡಲು ಸೂಚನೆ ನೀಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಮಾತ ನಾಡಿ, ಖಜಾನೆಗಳಿಂದ ಪ್ರಶ್ನೆ ಪತ್ರಿಕೆ ಯನ್ನು ಸ್ವೀಕರಿಸಿ ಅವುಗಳನ್ನು ಪರೀ ಕ್ಷಾ ಕೇಂದ್ರಗಳಿಗೆ ವಿತರಿಸುವ ವಾಹನ ಗಳಿಗೆ ಜಿ.ಪಿ.ಎಸ್ ಅಳವಡಿಸಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ನೇಮಿಸಲಾಗುವುದು. 

ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಮೊಬೈಲ್ ಸೇರಿ ದಂತೆ ಯಾವುದೇ ವಿದ್ಯುನ್ಮಾನ ಉಪ ಕರಣಗಳನ್ನು ತರುವಂತಿಲ್ಲ. ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಸಿಬ್ಬಂ ದಿಗಳು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಧರಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್‌, ಜಿಲ್ಲಾ ವಿಶೇಷ ವಿಭಾಗದ ಪೊಲೀಸ್ ನಿರೀ ಕ್ಷಕ  ಇಮ್ರಾನ್ ಬೇಗ್,  ಶಿಕ್ಷಣಾಧಿ ಕಾರಿ ರಾಜಶೇಖರ್, ಡಯಟ್ ಉಪನಿರ್ದೇಶಕರಾದ ಗೀತಾ, ಖಜಾನೆ   ಉಪನಿರ್ದೇಶಕರಾದ ಪ್ರಭಾವತಿ, ದಕ್ಷಿಣ ವಲಯದ
ಕ್ಷೇತ್ರ ಶಿಕ್ಷಣಾಧಿಕಾರಿ ಪುಪ್ಪಾವತಿ,   ಎಲ್ಲಾ ತಾಲ್ಲೂಕಿನ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರಾಂಶುಪಾಲರು ಉಪಸ್ಥಿತರಿದ್ದರು.

error: Content is protected !!