ಅವೈಜ್ಞಾನಿಕ ಜಾತಿ ಗಣತಿಯನ್ನು ಸಮಾಜ ಒಪ್ಪುವುದಿಲ್ಲ: ಎಸ್ಸೆಸ್

ಅವೈಜ್ಞಾನಿಕ ಜಾತಿ ಗಣತಿಯನ್ನು ಸಮಾಜ ಒಪ್ಪುವುದಿಲ್ಲ: ಎಸ್ಸೆಸ್

ಬೆಂಗಳೂರು, ಫೆ.29-  ಮನೆ, ಮನೆಗೆ ಭೇಟಿ ನೀಡದೇ ಅವೈಜ್ಞಾನಿಕವಾಗಿ ತಯಾರಿಸಲಾದ ವರದಿಯನ್ನು ಸಮಾಜ ಒಪ್ಪುವುದಿಲ್ಲ. ಈ ನಿಟ್ಟಿನಲ್ಲಿ ಹೋರಾಟ ಚಾಲ್ತಿ‌ಯಲ್ಲಿರಲಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಜಾತಿ ಗಣತಿ ವಿರುದ್ಧ ಮತ್ತೆ ಗುಡುಗಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಜಾತಿ ಗಣತಿ ವರದಿ ಸ್ವೀಕರಿಸುತ್ತಿದ್ದಂತೆ ಅಖಿಲ ಭಾರತ ವೀರಶೈವ ಮಹಾಸಭಾದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಜಾತಿ ಗಣತಿ ವರದಿ ಅವೈಜ್ಞಾನಿಕವಾಗಿದೆ ಎಂಬ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಜಾತಿ ಗಣತಿ ವಿರೋಧಿಸಿ ವೀರಶೈವ ಮಹಾಸಭಾದಿಂದ ಈಗಾಗಲೇ ಎರಡು ಬಾರಿ ಮನವಿ ಸಲ್ಲಿಸಲಾಗಿದೆ.  ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ವೀರಶೈವ ಮಹಾಸಭಾ ಸಮ್ಮೇಳನದಲ್ಲಿ ಕೂಡ ಜಾತಿ ಗಣತಿ ವಿರೋಧಿಸಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ಎಸ್ಸೆಸ್ ಹೇಳಿದ್ದಾರೆ.

error: Content is protected !!