ದಾವಣಗೆರೆ, ಮಾ.1- ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಶುಭಾರಂಭಗೊಂಡಿದ್ದು, ಮೊದಲ ದಿನ 16877 ವಿದ್ಯಾರ್ಥಿಗಳು ಕನ್ನಡ ಪರೀಕ್ಷೆ ಬರೆದಿದ್ದಾರೆ.
ದಾವಣಗೆರೆ ತಾಲ್ಲೂಕಿನಲ್ಲಿ 18 ಕೇಂದ್ರಗಳು, ಹರಿಹರ 4, ಜಗಳೂರು 3, ಚನ್ನಗಿರಿ 5, ಹೊನ್ನಾಳಿ ತಾಲೂಕಿನ 3 ಕೇಂದ್ರಗಳು ಸೇರಿದಂತೆ ಒಟ್ಟು 33 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಜಿಲ್ಲೆಯ 33 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.
ಪರೀಕ್ಷೆಗೆ ಹೆಸರು ನೊಂದಾಯಿಸಿದ್ದ 17,473 ವಿದ್ಯಾರ್ಥಿಗಳ ಪೈಕಿ 596 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ತಿಳಿಸಿದ್ದಾರೆ.