ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟಿಸಿದ ಎಸ್ಸೆಸ್ಸೆಂ

ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟಿಸಿದ ಎಸ್ಸೆಸ್ಸೆಂ

ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟಿಸಿದ ಎಸ್ಸೆಸ್ಸೆಂ - Janathavani

ದಾವಣಗೆರೆ, ಮಾ. 3 – ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಮತ್ತು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರುಗಳು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಉದ್ಘಾಟಿಸಿದರು. 

ಕಾರ್ಯಕ್ರಮದಲ್ಲಿ ಎಸ್.ಎಸ್. ಕೇರ್ ಲೈಫ್ ಟ್ರಸ್ಟ್‌ ಟ್ರಸ್ಟಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಷಣ್ಮುಖಪ್ಪ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ರೇಣುಕರಾಧ್ಯ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರುದ್ರಸ್ವಾಮಿ,  ತಾಲ್ಲೂಕು ಆರೋಗ್ಯ ಅಧಿಕಾರಿ ದೇವರಾಜ್ ಪೆಟ್ಟಿಗೆ, ವೈದ್ಯಾಧಿಕಾರಿ ಡಾ. ರಾಘವೇಂದ್ರ, ಮಹಾನಗರ ಪಾಲಿಕೆಯ ಸದಸ್ಯ ಮಂಜುನಾಥ್ ಗಡಿಗುಡಾಳ್‌, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ. ಸುರೇಶ್ ಬಾರ್ಕಿ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ ಮತ್ತು ಮಕ್ಕಳ ತಾಯಂದಿರು ಹಾಜರಿದ್ದರು.

error: Content is protected !!