ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು, ಮುಖಂಡರ ಸಭೆ

ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು, ಮುಖಂಡರ ಸಭೆ

ಪ್ರಭಾ ಮಲ್ಲಿಕಾರ್ಜುನ್ ಲೋಕಸಭಾ ಅಭ್ಯರ್ಥಿಯಾಗಲಿ : ಒಕ್ಕೊರಲಿನ ಆಗ್ರಹ

ದಾವಣಗೆರೆ, ಮಾ.11- ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರು ಅಭ್ಯರ್ಥಿ ಆಗಲಿ ಎಂದು ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ.

ಇಂದು ಸಂಜೆ ದಾವಣಗೆರೆಯ ಬಂಟರ ಭವನದಲ್ಲಿ ಸುಮಾರು 200ಕ್ಕೂ ಹೆಚ್ಚು ಕಾಂಗ್ರೆಸ್ ಪಕ್ಷದ ಜಿಲ್ಲಾ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಜನಪ್ರತಿನಿಧಿಗಳು ಸಭೆ ಸೇರಿ ಈ ನಿರ್ಣಯ ತೆಗೆದುಕೊಂಡರು.

ಸುಮಾರು 20 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಪ್ರತಿಯೊಂದು ಚುನಾವಣೆಗಳಲ್ಲಿ ಮತದಾರರ ಬಳಿ ತೆರಳಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿರುವ ಪ್ರಭಾ ಮಲ್ಲಿಕಾರ್ಜುನ್ ಅವರು, ಈ ಕ್ಷೇತ್ರದ ಜನತೆಯ ಮನೆ ಮಾತಾಗಿದ್ದಾರೆ. ಅವರ ಸ್ಪರ್ಧೆಯಿಂದ ಲಕ್ಷಕ್ಕೂ ಹೆಚ್ಚು ಮತಗಳಿಂದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.

ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ನೂರಾರು ಆರೋಗ್ಯ ಶಿಬಿರಗಳನ್ನು ನಡೆಸಿ, ಅನೇಕರ ಬಾಳಲ್ಲಿ ಆಶಾಕಿರಣವಾಗಿರುವ ಪ್ರಭಾ ಮಲ್ಲಿಕಾರ್ಜುನ್ ಅವರು, ಪ್ರತಿನಿತ್ಯ ನೂರಾರು ಸಾರ್ವಜನಿಕರನ್ನು ಭೇಟಿ ಮಾಡಿ, ಸ್ಥಳದಲ್ಲೇ ಸಮಸ್ಯೆ ಬಗೆಹರಿಸುತ್ತಿದ್ದಾರೆ. ಅವರು ಅಭ್ಯರ್ಥಿಯಾದರೆ ನಮ್ಮ ಪಕ್ಷಕ್ಕೆ ಅನುಕೂಲವಾಗಲಿದೆ ಎಂದರು.

ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಪ್ರಭಾ ಮಲ್ಲಿಕಾರ್ಜುನ್ ಅವರು, ಈ ಕ್ಷೇತ್ರವನ್ನು ಪ್ರತಿನಿಧಿಸಿದರೆ ದಾವಣಗೆರೆ ಲೋಕಸಭಾ ಕ್ಷೇತ್ರ ಮಾದರಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ಬಗ್ಗೆ ಜಿಲ್ಲೆಯ ಪಕ್ಷದ ವರಿಷ್ಠರಾದ ಶಾಸಕ ಶಾಮನೂರು ಶಿವಶಂಕರಪ್ಪನವರು ಮತ್ತು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡೋಣ. ಅವಶ್ಯವಿದ್ದರೆ ಹೈಕಮಾಂಡ್‍ಗೂ ನಿಯೋಗ ತೆರಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್   ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಕೆಪಿಸಿಸಿ ಸದಸ್ಯ ಮುದೇಗೌಡ್ರು ಗಿರೀಶ್, ನಿಟುವಳ್ಳಿ ಆರ್.ಎಸ್.ಶೇಖರಪ್ಪ, ಎ.ನಾಗರಾಜ್ ಅವರುಗಳ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ, ಮಹಾಪೌರ ವಿನಾಯಕ ಪೈಲ್ವಾನ್, ಬಿ.ಹೆಚ್.ವೀರಭದ್ರಪ್ಪ, ಶ್ರೀಮತಿ ಅನಿತಾಬಾಯಿ ಮಾಲತೇಶರಾವ್ ಜಾಧವ್, ಆರ್.ಹೆಚ್.ನಾಗಭೂಷಣ್, ಎಸ್.ಮಲ್ಲಿಕಾರ್ಜುನ್, ಗುರುರಾಜ್, ಆಮ್ ಆದ್ಮಿ ಮಾಜಿ ಅಧ್ಯಕ್ಷ ರಾಘವೇಂದ್ರ, ಮಂಗಳಮ್ಮ, ಪಾಲಿಕೆ ಸದಸ್ಯರುಗಳಾದ ಅಬ್ದುಲ್ ಲತೀಫ್, ಚಮನ್‍ಸಾಬ್, ಪಾಮೇನಹಳ್ಳಿ ನಾಗರಾಜ್, ಉದಯಕುಮಾರ್, ಜಾಕೀರ್ ಅಲಿ, 
ಸೈಯದ್ ಚಾರ್ಲಿ, ಆಶಾ ಉಮೇಶ್, ಕಬೀರ್ ಖಾನ್, ಗಣೇಶ ಹುಲ್ಮನಿ, ಗೋಪಿನಾಯ್ಕ, ನರೇಂದ್ರ, ಉಮೇಶ್, ಕೊಟ್ರಯ್ಯ, ಲಾಲ್ ಆರೀಫ್, ಪರಸಪ್ಪ, ಪಾಪಣ್ಣಿ, ಕುಂದವಾಡದ ಮಾರುತಿ, ಕರೀಗೌಡ್ರು, ಪರಮೇಶ್, ಶಿವಶಂಕರ್, ಸುಷ್ಮಾ ಪಾಟೀಲ್, ಮೀನಾಕ್ಷಿ ಜಗದೀಶ್, ಇಟ್ಟಿಗುಡಿ ಮಂಜುನಾಥ್ ಸೇರಿದಂತೆ ಜನಪ್ರತಿನಿಧಿಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

error: Content is protected !!