ಮುಕ್ತ ಮನಸ್ಸಿನಿಂದ ಮತ ಚಲಾಯಿಸಿ: ಡಿಸಿ

ಮುಕ್ತ ಮನಸ್ಸಿನಿಂದ ಮತ ಚಲಾಯಿಸಿ: ಡಿಸಿ

ದಾವಣಗೆರೆ, ಮಾ.29- ಲೋಕಸಭಾ  ಚುನಾವಣೆ ನಡೆಯುತ್ತಿದ್ದು, ಮೇ 7 ರಂದು ದಾವಣಗೆರೆ ಕ್ಷೇತ್ರಕ್ಕೆ ಮತದಾನ ನಡೆಯಲಿದೆ. ಮತದಾರರು ತಪ್ಪದೇ ಮತಗಟ್ಟೆಗೆ ಬಂದು ಮತ ಚಲಾಯಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಕರೆ ನೀಡಿದರು.

ಅವರು ಶುಕ್ರವಾರ ಜಿಲ್ಲಾಡಳಿತ, ಸ್ವೀಪ್ ಸಮಿತಿಯಿಂದ ಜಿಲ್ಲಾಡಳಿತ ಭವನದ ಮೆಟ್ಟಿಲುಗಳಲ್ಲಿ ಗ್ರಾಮೀಣಾಭಿವೃದ್ದಿ  ಹಾಗೂ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳಿಂದ ಮತದಾರರ ಜಾಗೃತಿ ಅಂಗವಾಗಿ ಏರ್ಪಡಿಸಿದ ಕ್ಯಾಂಡಲ್ ಲೈಟ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು.

ಚುನಾವಣೆಯಲ್ಲಿ ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ನಿರ್ಮಲ ಮನಸ್ಸಿನಿಂದ ಮತ ಚಲಾಯಿಸಬೇಕು. ತಮ್ಮ ಒಂದು ಮತ ದೇಶದ ಸುಭದ್ರತೆಗೆ ದಾರಿ ದೀಪವಾಗಲಿದೆ. ಇದರಿಂದ ಒಮ್ಮತ ಅಭಿಪ್ರಾಯದ ಸರ್ಕಾರ ರಚನೆಯಾಗುವುದರೊಂದಿಗೆ ಸರ್ವರ ಒಳಿತು ಇದರಲ್ಲಿ ಅಡಗಿರುತ್ತದೆ ಎಂದು ಅವರು ತಿಳಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಸುರೇಶ್ ಬಿ. ಇಟ್ನಾಳ್ ಮಾತಾನಾಡಿ, ಎಲ್ಲರನ್ನೊಳಗೊಂಡ ಸರ್ಕಾರ ರಚನೆಯಾಗಲು ಎಲ್ಲಾ ಮತದಾರರು ತಪ್ಪದೇ ಮತದಾನ ಮಾಡುವ ಮೂಲಕ ತಮ್ಮ ಜವಾಬ್ದಾರಿಯನ್ನು ನಿಭಾಯಿಸಲು ಮನವಿ ಮಾಡಿದರು.

ತಾಲ್ಲೂಕು ಪಂಚಾಯಿತಿ  ಜಿ.ಪಂ ಉಪ ಕಾರ್ಯದರ್ಶಿ ಕೃಷ್ಣನಾಯ್ಕ್, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಯಾಂಡಲ್ ಲೈಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!