ಕುಂದುವಾಡ ಕೆರೆಯಂತೆ ಆವರಗೆರೆ ಕೆರೆ ಅಭಿವೃದ್ಧಿ

ಕುಂದುವಾಡ ಕೆರೆಯಂತೆ ಆವರಗೆರೆ ಕೆರೆ ಅಭಿವೃದ್ಧಿ

ಕಾಂಗ್ರೆಸ್‌ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ, ಏ. 15 – ದಾವಣಗೆರೆ ನಗರಕ್ಕೆ ಹೊಂದಿಕೊಂಡಿರುವ ಆವರಗೆರೆ ಕೆರೆ ಯನ್ನು ಕುಂದುವಾಡ ಕೆರೆಯಂತೆ ಅಭಿವೃದ್ಧಿ ಗೊಳಿಸಿ, ಉತ್ತಮ ಪ್ರವಾಸಿ ತಾಣವನ್ನಾಗಿಸ ಲಾಗುವುದು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆವರಗೆರೆ ಗ್ರಾಮದಲ್ಲಿ ಇಂದು ಪ್ರಚಾರ ನಡೆಸಿ, ಸಾರ್ವಜನಿಕರನ್ನುದ್ದೇಶಿಸಿ ಅವರು ಮಾತನಾಡಿದರು.

ಆವರಗೆರೆಯನ್ನು ಈಗಾಗಲೇ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಅಭಿವೃದ್ಧಿ ಗೊಳಿಸಲು ಕ್ರಮ ಕೈಗೊಂಡಿದ್ದು, ಕೆರೆಗೆ ತುಂಗ ಭದ್ರಾ ನದಿ ಅಥವಾ ಭದ್ರಾ ಕಾಲುವೆಯಿಂದ ನೀರು ಸರಬರಾಜು ಮಾಡಿ ಈ ಭಾಗದಲ್ಲಿ 24 ಗಂಟೆ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಭರವಸೆ ನೀಡಿದಂತೆ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದು, ಇಂತಹ ಮಹಾತ್ವಾಕಾಂಕ್ಷೆ ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಜಾರಿಗೆ ತರುವ ಚಿಂನೆ ನಡೆಸಿದೆ ಎಂದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಜಯಮ್ಮ ಗೋಪಿನಾಯ್ಕ, ಕರೇಗೌಡ್ರು ರೇವಣಪ್ಪ, ಅಣ್ಣೇಶ್ ನಾಯ್ಕ ಮತ್ತಿತರರಿದ್ದರು. 

ಚುನಾವಣಾ ಪ್ರಚಾರದಲ್ಲಿ ಮುಖಾಮುಖಿಯಾದ ತಾಯಿ-ಮಗಳು

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಇಂದು ಸಂಜೆ ಮಹಾನಗರ ಪಾಲಿಕೆ ವ್ಯಾಪ್ತಿಯ 30ನೇ ವಾರ್ಡ್ ಅವರಗೆರೆಯಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಅದೇ ಗ್ರಾಮದಲ್ಲಿ ಮಗಳ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಶ್ರೀಮತಿ ಗಿರಿಜಮ್ಮ (ಪ್ರಭಾ ಮಲ್ಲಿಕಾರ್ಜುನ್ ಅವರ ತಾಯಿ) ಭೇಟಿಯಾದರು.

ಈ ಸಂದರ್ಭದಲ್ಲಿ ತಾಯಿ-ಮಗಳು ಇಬ್ಬರೂ ಕೆಲವು ಕ್ಷಣಗಳು ಚುನಾವಣಾ ಪ್ರಚಾರದ ಬಗ್ಗೆ ಚರ್ಚೆ ನಡೆಸಿದರು.

error: Content is protected !!