57 ಕೆರೆ ಯೋಜನೆ ಕಾಂಗ್ರೆಸ್ ಸರ್ಕಾರದ ಸಾಧನೆ

57 ಕೆರೆ ಯೋಜನೆ ಕಾಂಗ್ರೆಸ್ ಸರ್ಕಾರದ ಸಾಧನೆ

ಜಗಳೂರಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವ ಎಸ್ಸೆಸ್ಸೆಂ

ಜಗಳೂರು, ಏ. 16 – ಪಟ್ಟಣದಲ್ಲಿ ನಡೆದ ತರಳಬಾಳು ಹುಣ್ಣಿಮೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ಬರಪೀಡಿತ ತಾಲ್ಲೂಕಿನ 57 ಕೆರೆಗಳನ್ನು ತುಂಬಿಸುವ ಯೋಜನೆ ಯನ್ನು ಬಜೆಟ್ ನಲ್ಲಿ ಸೇರ್ಪಡೆಗೊಳಿಸಿದ್ದರಿಂದ, ಈ ಭಾಗದ ನೀರಾವರಿ ಕನಸು ನನಸಾಗುತ್ತಿದೆ. ಇದು ಕಾಂ ಗ್ರೆಸ್ ಪಕ್ಷದ ಸಾಧನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಹೇಳಿದರು.

ಪಟ್ಟಣದಲ್ಲಿ  ಲೋಕಸಭಾ ಚುನಾವಣೆ ಪ್ರಯುಕ್ತ ರೋಡ್ ಶೋ ನಂತರ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವರು ಮಾತನಾಡಿದರು.

57 ಕೆರೆ ಯೋಜನೆ ಪರಿಣಾಮ ಹಿಂದುಳಿದ ಜಗಳೂರು ತಾಲ್ಲೂಕಿನಲ್ಲಿ ಈಗಾಗಲೇ 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆ ಜಾರಿಯಾದಲ್ಲಿ ಇಡೀ ತಾಲ್ಲೂಕು ಸಮಗ್ರ ನೀರಾವರಿಯಾಗಲಿದೆ. ಶಾಸಕ ಬಿ.ದೇವೇಂದ್ರಪ್ಪ ಅವರೊಂದಿಗೆ ಸೇರಿ ಸಮಗ್ರ ನೀರಾವರಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗುವಂತೆ ಮಾಜಿ ಸಂಸದ ಚನ್ನಯ್ಯ ಒಡೆಯರ್ ಅವರ ಪುತ್ರ ಉದಯ ಶಂಕರ್ ಒಡೆಯರ್ ಹಾಗೂ ಹೊನ್ನಾಳಿಯ ಎಚ್.ಬಿ.‌ಮಂಜಪ್ಪ ಅವರಿಗೆ ಕೇಳಿಕೊಂಡೆ. ಆದರೆ ಬೇರೆ ಬೇರೆ ಕಾರಣಗಳಿಗಾಗಿ ಅವರು ಸ್ಪರ್ಧೆಗೆ ಒಪ್ಪಲಿಲ್ಲ. ಟಿಕೆಟ್ ಕೊಡುವಂತೆ ವಿನಯ್ ಕುಮಾರ್ ನನಗೆ ಕೇಳಿದ್ದರು. ನಮ್ಮ ಜಿಲ್ಲೆಯವರೇ ಇರುವಾಗ ಹೊರ ಜಿಲ್ಲೆಯವರಿಗೆ ಹೇಗೆ ಕೊಡೋಕಾ ಗುತ್ತೆ ಅಂತಾ ಹೇಳಿದ್ದೆ. ನಮ್ಮ ಜಿಲ್ಲೆಯಲ್ಲಿ ಸಮರ್ಥ ವ್ಯಕ್ತಿಗಳಿ ಲ್ಲವೇ. ಹೈ ಕಮಾಂಡ್ ಸರ್ವೇ ಮಾಡಿ ಡಾ. ಪ್ರಭಾ ಅವರೇ ಅಭ್ಯರ್ಥಿ ಯಾಗಬೇಕು ಎಂದು ಹೇಳಿದ್ದ ರಿಂದ ಕೊನೆಗೆ ಒಪ್ಪಿದ್ದು, ಎಲ್ಲರೂ ಒಮ್ಮತದಿಂದ ಸಹ ಕಾರ ನೀಡಿ ಗೆಲ್ಲಿಸಿ ಎಂದು ಸಚಿವ ಮಲ್ಲಿಕಾರ್ಜುನ್ ಮನವಿ ಮಾಡಿದರು.

ಶಾಸಕ ಬಿ. ದೇವೇಂದ್ರಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಈ ಬಾರಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಸಮರ್ಥ ಅಭ್ಯರ್ಥಿಯಾಗಿದ್ದು, ಜಗಳೂರು ವಿಧಾನ ಸಭಾ ಕ್ಷೇತ್ರದಿಂದ ಕನಿಷ್ಟ 25 ಸಾವಿರ ಮತಗಳ ಲೀಡ್ ಪಡೆಯಲಿದ್ದಾರೆ ಎಂದರು.

ಮುಖಂಡ ಡಾ. ಟಿ.ಜಿ. ರವಿಕುಮಾರ್ ಮಾತನಾಡಿ, ಬಿಜೆಪಿ ಕ್ಯಾನ್ಸರ್ ಇದ್ದಂತೆ. ಬುಡ ಸಮೇತ ಬಿದ್ದು ಹೋಗುತ್ತದೆ. ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಕೆಲವು ವ್ಯಕ್ತಿಗಳ ಕಪಿಮುಷ್ಟಿಯಲ್ಲಿ ಸಿಲುಕಿದೆ. ಪ್ರಾಮಾಣಿಕ ಕಾರ್ಯಕರ್ತರ ಮೇಲೆ ದರ್ಪ, ದೌರ್ಜನ್ಯ ನಡೆಯುತಿದ್ದು, ಅದನ್ನು ಪ್ರತಿಭಟಿಸಿ ಆತ್ಮ ಸಂತೋಷದಿಂದ ನಾನು ಹಾಗೂ ನನ್ನ ತಂದೆ ಟಿ. ಗುರುಸಿದ್ದನಗೌಡ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇವೆ. ತವರು ಮನೆಗೆ ಬಂದಷ್ಟು ಸಂತಸವಾಗುತ್ತಿದೆ ಎಂದು ಹೇಳಿದರು.

ಬಿಜೆಪಿ ಮುಖಂಡ ಲಿಂಗಣ್ಣನಹಳ್ಳಿ ಕೃಷ್ಣ ಮೂರ್ತಿ, ಕೆಚ್ಚೇನಹಳ್ಳಿ ಸಿದ್ದೇಶ್, ಗಿಡ್ಡನಕಟ್ಟೆ ಕಾಂತರಾಜ್ ಸೇರಿದಂತೆ 150ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಪಕ್ಷ ತೊರೆದು  ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಸಮಾರಂಭದಲ್ಲಿ ಮಾಜಿ ಶಾಸಕ ಟಿ. ಗುರುಸಿದ್ದನಗೌಡ, ಬ್ರಾಹ್ಮಣ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಾಕೆಪಿಸಿಸಿ ಎಸ್.ಟಿ. ಘಟಕದ ರಾಜ್ಯಾದ್ಯಕ್ಷ ಕೆ.ಪಿ. ಪಾಲಯ್ಯ,   ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೀರ್ತಿ ಕುಮಾರ್, ಕೆಪಿಸಿಸಿ ಸದಸ್ಯ ಕಲ್ಲೇಶ್ ಪಟೇಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹ್ಮದ್,  ಉದಯಶಂಕರ್ ಒಡೆಯರ್, ಬಿ.ಮಹೇಶ್ವರಪ್ಪ, ಸುರೇಶ್ ಗೌಡ್ರು, ಶಿವನಗೌಡ, ಪಲ್ಲಾಗಟ್ಟೆ ಶೇಖರಪ್ಪ. ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

error: Content is protected !!