ಕಾಂಗ್ರೆಸ್‌ ಅಭ್ಯರ್ಥಿ ಡಾ. ಪ್ರಭಾರಿಗೆ ಪರಿಶಿಷ್ಟ – ಹಿಂದುಳಿದ ಜಾತಿ ಮಠಗಳ ಆಶೀರ್ವಾದ

ಕಾಂಗ್ರೆಸ್‌ ಅಭ್ಯರ್ಥಿ ಡಾ. ಪ್ರಭಾರಿಗೆ ಪರಿಶಿಷ್ಟ – ಹಿಂದುಳಿದ ಜಾತಿ ಮಠಗಳ ಆಶೀರ್ವಾದ

ಸಚಿವ ಎಸ್ಸೆಸ್ಸೆಂಗೆ ಗುರು ರಕ್ಷೆ

ಚಿತ್ರದುರ್ಗ, ಏ. 17- ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಅವರು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರ ಪರವಾಗಿ ಆಶೀರ್ವಾದ ಅಪೇಕ್ಷಿಸಿ ಚಿತ್ರದುರ್ಗದ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠ ಹಾಗೂ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ಇಂದು ಭೇಟಿ ನೀಡಿದ್ದರು.

ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮಿಗಳು, ಕುಂಚಿಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಯಾದವ ಗುರುಪೀಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಈಡಿಗ ಗುರುಪೀಠದ ಶ್ರೀ ರೇಣುಕಾನಂದ ಸ್ವಾಮೀಜಿ, ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಕುಂಬಾರ ಗುರುಪೀಠದ ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ಶಿವಶಕ್ತಿ ಗುರುಪೀಠದ ಶ್ರೀ ಬಸವಪ್ರಸಾದ ಸ್ವಾಮೀಜಿ, ಪಾರಮಾರ್ಥಿಕ ಗವಿಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಕೊರಟಗೆರೆ ಅನ್ನಪೂರ್ಣೇಶ್ವರಿ ಮಠದ ಶ್ರೀ ಬಸವ ಮಹಾಲಿಂಗ ಸ್ವಾಮೀಜಿ, ಹೆಳವ ಗುರುಪೀಠದ ಶ್ರೀ ಬಸವ ಭೃಂಗೇಶ್ವರ ಮಹಾಸ್ವಾಮಿಗಳು, ಬಸವಕಲ್ಯಾಣ ಶ್ರೀ ಸತ್ಯಕ್ಕ ತಾಯಿ, ಪೂಜ್ಯರು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರನ್ನು ಆಶೀರ್ವದಿಸಿದರು.

error: Content is protected !!