ನಗರದಲ್ಲಿ ಸಿಇಟಿ ಪರೀಕ್ಷೆ ಸುಸೂತ್ರ

ನಗರದಲ್ಲಿ ಸಿಇಟಿ ಪರೀಕ್ಷೆ ಸುಸೂತ್ರ

ಬೆಳಗಿನ ಅವಧಿಗೆ 1281, ಮಧ್ಯಾಹ್ನ 257 ಗೈರು

ದಾವಣಗೆರೆ, ಏ.18- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವೃತ್ತಿಪರ ಕೋರ್ಸ್‍ಗಳಾದ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ಸಂಗೋಪನೆ, ಫಾರ್ಮಸಿ, ಬಿಎಸ್ಸಿ ನರ್ಸಿಂಗ್ ಸೇರಿದಂತೆ ಇನ್ನಿತರೆ ಕೋರ್ಸ್‍ಗಳಿಗೆ 2024 ನೇ ಸಾಲಿಗೆ ಪ್ರವೇಶ ಪಡೆಯಲು ಗುರುವಾರ ಸಿಇಟಿ ಪರೀಕ್ಷೆ ಸುಗಮವಾಗಿ ನಡೆಯಿತು.

ಬೆಳಗಿನ ಅವಧಿಯ ಪರೀಕ್ಷೆಯಲ್ಲಿ ನಡೆದ ಜೀವಶಾಸ್ತ್ರ ವಿಷಯದ ಪರೀಕ್ಷೆಗೆ 1,281 ಹಾಗೂ ಮಧ್ಯಾಹ್ನ ನಡೆದ ಗಣಿತಶಾಸ್ತ್ರ ಪರೀಕ್ಷೆಗೆ 257 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ತಿಳಿಸಿದ್ದಾರೆ. 

ನಗರದ 23 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆದಿದ್ದು ಜೀವಶಾಸ್ತ್ರ ವಿಷಯವನ್ನು 12,296 ವಿದ್ಯಾರ್ಥಿಗಳು ತೆಗೆದುಕೊಂಡಿದ್ದು ಇದರಲ್ಲಿ 11,015 ವಿದ್ಯಾರ್ಥಿಗಳು ಹಾಜರಾಗಿ ,1281 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಗಣಿತಶಾಸ್ತ್ರ ವಿಷಯದ ಪರೀಕ್ಷೆಯನ್ನು 12,300 ವಿದ್ಯಾರ್ಥಿಗಳು ತೆಗೆದುಕೊಂಡಿದ್ದು 12,043 ವಿದ್ಯಾರ್ಥಿಗಳು ಹಾಜರಾಗಿ 257 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

error: Content is protected !!