ಮೂರು ದಿಕ್ಕುಗಳಿಂದ ಸಾಗಿ ಬಂದ ಕೇಸರಿ ಪಡೆ

ಮೂರು ದಿಕ್ಕುಗಳಿಂದ ಸಾಗಿ ಬಂದ ಕೇಸರಿ ಪಡೆ

ಬೃಹತ್ ಮೆರವಣಿಗೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ನಾಮಪತ್ರ ದಾಖಲು

ದಾವಣಗೆರೆ, ಏ. 19 – ನಗರದ ಮೂರು ದಿಕ್ಕುಗಳಿಂದ ಆರಂಭಿಸಲಾದ ಬೃಹತ್ ಮೆರವಣಿಗೆಯ ಮೂಲಕ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಗಾಯತ್ರಿ ಸಿದ್ದೇಶ್ವರ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮೆರವಣಿಗೆಯಲ್ಲಿ ಕೇಸರಿ ಪಕ್ಷಕ್ಕೆ ಜೆಡಿಎಸ್ ಸಹ ಸಾಥ್ ನೀಡಿತ್ತು.

ನಗರದಲ್ಲಿ ಏಕಕಾಲಕ್ಕೆ ಮೂರು ಕಡೆಯಿಂದ ಆರಂಭಗೊಂಡ ಮೆರವಣಿಗೆ ಗಾಂಧಿ ವೃತ್ತದಲ್ಲಿ ಜೊತೆಯಾಗಿ ಹಳೇ ವಾಣಿ ಹೋಂಡಾ ಶೋ ರೂಮ್‌ವರೆಗೂ ತೆರಳಿತು. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರು ನಗರ ದೇವತೆ ದುಗ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಪತಿ ಸಂಸದ ಜಿ.ಎಂ.ಸಿದ್ದೇಶ್ವರ್ ನಿಟುವಳ್ಳಿ ದುರ್ಗಾಂಬಿಕಾ ದೇವಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಹರಿಹರ ಶಾಸಕ ಬಿ.ಪಿ.ಹರೀಶ್ ಹಾಗೂ ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್ ನೇತೃತ್ವದ ತಂಡ ರಾಂ ಅಂಡ್ ಕೋ ವೃತ್ತದಲ್ಲಿ ಗಣೇಶ ದೇವರಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ನಂತರ ಗಾಯತ್ರಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಮಾಧುಸ್ವಾಮಿ, ಭೈರತಿ ಬಸವರಾಜ್, ಪರಿಷತ್ ಸದಸ್ಯ ರವಿಕುಮಾರ್ ಅವರ ಜೊತೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಳ್ಳಾರಿ ಸಂಸದ ದೇವೇಂದ್ರಪ್ಪ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ, ಹರಿಹರ ಶಾಸಕ ಬಿ.ಪಿ.ಹರೀಶ್, ಪರಿಷತ್ ಸದಸ್ಯ ರವಿಕುಮಾರ್,  ಮಾಜಿ ಸಚಿವರಾದ ಭೈರತಿ ಬಸವರಾಜ್, ಮುರುಗೇಶ್ ನಿರಾಣಿ, ಎಸ್.ಎ.ರವೀಂದ್ರನಾಥ್, ಜೆ.ಮಾಧುಸ್ವಾಮಿ, ಜಿ.ಕರುಣಾಕರ ರೆಡ್ಡಿ, ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕರಾದ ಎಸ್.ವಿ.ರಾಮಚಂದ್ರಪ್ಪ, ಹೆಚ್.ಪಿ.ರಾಜೇಶ್, ಮಾಡಾಳ್ ವಿರೂಪಾಕ್ಷಪ್ಪ, ಪ್ರೊ.ಲಿಂಗಣ್ಣ, ಬಸವರಾಜನಾಯ್ಕ್, ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಮಾಜಿ ಮೇಯರ್ ಬಿ.ಜಿ.ಅಜಯ್ ಕುಮಾರ್, ಚಿತ್ರ ನಟಿ ಶೃತಿ, ಗಾಯಕ ಚಂದನ್ ಶೆಟ್ಟಿ, ಮುಖಂಡರಾದ ಮಾಡಾಳ್ ಮಲ್ಲಿಕಾರ್ಜುನ್,  ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶಿವಕುಮಾರ್ ರಾಜನಹಳ್ಳಿ, ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಧನಂಜಯ್ ಕಡ್ಲೇಬಾಳು, ಅನಿಲ್ ಕುಮಾರ್ ನಾಯ್ಕ್,  ಐರಣಿ ಅಣ್ಣೇಶ್, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್, ತುಮ್ಕೋಸ್ ಮಾಜಿ ಅಧ್ಯಕ್ಷ ಹೆಚ್.ಎಸ್.ಶಿವಕುಮಾರ್, ಚಂದ್ರಶೇಖರ್ ಪೂಜಾರ್, ಮಾಜಿ ಮುಖ್ಯ ಸಚೇತಕರಾದ ಎ.ಹೆಚ್.ಶಿವಯೋಗಿಸ್ವಾಮಿ,  ಜೆಡಿಎಸ್ ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್, ಜೆಡಿಎಸ್ ಜಿಲ್ಲಾಧ್ಯಕ್ಷ ಚಿ.ಚಿದಾನಂದಪ್ಪ,  ಚುನಾವಣಾ ಸಂಚಾಲಕ ವೀರೇಶ್ ಹನಗವಾಡಿ ಮತ್ತಿತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

error: Content is protected !!