ಮಹಿಳೆಯರ ಸಬಲೀಕರಣಕ್ಕೆ ಪ್ರಾಶಸ್ತ್ಯ: ಡಾ.ಪ್ರಭಾ

ಮಹಿಳೆಯರ ಸಬಲೀಕರಣಕ್ಕೆ ಪ್ರಾಶಸ್ತ್ಯ: ಡಾ.ಪ್ರಭಾ

ನವೋದಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಡಾ. ಪ್ರಭಾ  ಅವರಿಗೆ  ಮಹಿಳೆಯರ ಅಪಾರ ಬೆಂಬಲ

 ದಾವಣಗೆರೆ,ಏ.29- ಕಾಂಗ್ರೆಸ್ ಪಕ್ಷ ಮೊದಲ ಬಾರಿಗೆ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲೂ ಹೆಚ್ಚಿನ ಅವಕಾಶ ಕಲ್ಪಿಸಿದ್ದು, ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶೇ.50 ರಷ್ಟು ಮಹಿಳೆಯರಿಗೆ ಅವಕಾಶ ನೀಡಲಾಗಿದ್ದು, ಅದರಂತೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದೆ ಎಂದು  ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ನವೋದಯ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರದ  ಶಾಮನೂರು ಪಾರ್ವತಮ್ಮ ಶಿವಶಂಕರಪ್ಪ ಸಮುದಾಯ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾ ರ್ಜುನ್‍ಗೆ ಬೆಂಬಲ ಸೂಚಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷ ಮಹಿಳಾ ಸಬಲೀಕರಣಕ್ಕೆ ಅನೇಕ ಕಾರ್ಯಕ್ರಮಗಳನ್ನು ರೂಪಿಸುತ್ತಾ ಬಂ ದಿದ್ದು, ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಮಹಿಳೆಯರಿಗೆ ನೀಡಿದ ಆಶ್ವಾಸನೆಯನ್ನು ಈಡೇರಿ ಸಿದ್ದು, ಗೃಹಲಕ್ಷ್ಮಿ, ಶಕ್ತಿ ಯೋಜನೆಯನ್ನು ಸಂಪೂ ರ್ಣವಾಗಿ ಜಾರಿಗೊಳಿಸಲಾಗಿದೆ. ದಾವಣಗೆರೆ ಜಿಲ್ಲೆ ಯಲ್ಲಿ ಸುಮಾರು 1117 ಕೋಟಿಯಷ್ಟು ಹಣವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದರು.

ನಿಮ್ಮ ಸಹಕಾರದಿಂದ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆ ಮೂಲಕ ವಾರ್ಷಿಕ 1 ಲಕ್ಷ, ಕೇಂದ್ರ ಸರ್ಕಾರದ ಉದ್ಯೋಗಗ ಳಲ್ಲಿ ಶೇ.50 ರಷ್ಟು ಮೀಸಲು ಸೇರಿದಂತೆ 5 ಯೋ ಜನೆಗಳನ್ನು ಜಾರಿಗೆ ತರಲಾಗುವುದು ಎಂದರು.

ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಿದ್ದು, ಇಂದು ಕರ್ನಾಟಕ ರಾಜ್ಯದಲ್ಲಿ 6 ಜನ ಮಹಿಳೆಯರಿಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನಾಗಿಸಿದೆ ಎಂದರು.

ಮಹಿಳೆಯರ ಸಬಲೀಕರಣಕ್ಕೆ ಪ್ರಾಶಸ್ತ್ಯ: ಡಾ.ಪ್ರಭಾ - Janathavani

ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಆರೂ ಜನ ಮಹಿಳೆಯರು ಗೆಲುವು ಸಾಧಿಸುವರು ಎಂದು ಭವಿಷ್ಯ ನುಡಿದ ಅವರು, ಈ ಮಹಿಳೆಯರು ರಾಜ್ಯದ ಎಲ್ಲ ಮಹಿಳೆಯರ ಧ್ವನಿಯಾಗಿ ಕೆಲಸ ಮಾಡುವರು ಎಂದರು.

ಸಭೆಯ ನೇತೃತ್ವ ವಹಿಸಿದ್ದ ಡಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷರೂ ಆದ ಹಾಲಿ ನಿರ್ದೇಶಕ ಜೆ.ಆರ್.ಷಣ್ಮುಖಪ್ಪ ಮಾತನಾಡಿ, ಕಾಂಗ್ರೆಸ್‍ನ ಪ್ರಭಾ ಮಲ್ಲಿಕಾರ್ಜುನ್‍ಗೆ ಬೆಂಬಲ ಸೂಚಿಸಿ ಸುಮಾರು ಆರು ಸಾವಿರದಿಂದ ಏಳು ಸಾವಿರ ಜನ ಸೇರಿದ್ದಾರೆ. ಈ ಬಾರಿ ಕಾಂಗ್ರೆಸ್ ಜಯಭೇರಿ ಭಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಹಿಳಾ ಅಭಿವೃದ್ಧಿ, ದಾವಣಗೆರೆ ಅಭಿವೃದ್ಧಿಗೆ ಪ್ರಭಾ ಮಲ್ಲಿಕಾರ್ಜುನ್ ಬೇಕಿದ್ದು, ಈ ಬಾರಿ ಅವರನ್ನು ಗೆಲ್ಲಿಸುವ ಮೂಲಕ ತ್ರಿಬಲ್ ಎಂಜಿನ್ ಸರ್ಕಾರ ರಚಿಸುತ್ತೇವೆ. ಎಸ್.ಎಸ್. ಮಲ್ಲಿಕಾರ್ಜುನ್ ಅವರ ಅಭಿವೃದ್ಧಿ ಕೆಲಸಗಳು ಕೈ ಹಿಡಿಯಲಿದ್ದು, ಜನತೆ ಕಾಂಗ್ರೆಸ್‍ಗೆ ಬೆಂಬಲ ನೀಡಬೇಕೆಂದು ಹೇಳಿದರು. 

ಶ್ರೀಮತಿ ಕಿರುವಾಡಿ ಗಿರಿಜಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಚಿಕ್ಕಮಗಳೂರು ಶಾಸಕ ಡಿ.ಸಿ.ತಮ್ಮಣ್ಣ, ಕಾಂಗ್ರೆಸ್ ನಾಯಕರಾದ ಅಣಬೇರು ರಾಜಣ್ಣ, ಐಗೂರು ಚಂದ್ರಶೇಖರ್, ಕಲಪನಹಳ್ಳಿ ಸೋಮಶೇಖರಪ್ಪ, ಸಿಬ್ಬಂದಿಗಳಾದ ವೀಣಾ, ಮಮತಾ, ರೇಣುಕಾ, ಬಸಮ್ಮ ಸೇರಿದಂತೆ ಇತರರು ಇದ್ದರು.

error: Content is protected !!