ಮತ್ತೆ ಜೈಲು ಪಾಲಾದ ಮುರುಘಾ ಶ್ರೀ

ಮತ್ತೆ ಜೈಲು ಪಾಲಾದ ಮುರುಘಾ ಶ್ರೀ

ಚಿತ್ರದುರ್ಗ, ಏ. 29 – ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರು ಸೋಮವಾರ ಮತ್ತೆ ಜೈಲು ಪಾಲಾಗಿದ್ದಾರೆ.

ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರಿಗೆ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಕಳೆದ ಮಂಗಳವಾರ ರದ್ದು ಮಾಡಿತ್ತು ಮತ್ತು ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಆರೋಪಿಗೆ ಸೂಚಿಸಿತ್ತು. ಅದರಂತೆ ಶರಣರು ಚಿತ್ರದುರ್ಗದ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮೇ 27ಕ್ಕೆ ಮುಂದಿನ ವಿಚಾರಣೆ ನಿಗದಿಗೊಳಿಸಲಾಗಿದೆ.

error: Content is protected !!