ದಾವಣಗೆರೆ, ಮೇ 7 – ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹಾಗೂ ಸಂಸದ ಜಿ.ಎಂ. ಸಿದ್ದೇಶ್ವರ ಅವರು ನಗರದ ತರಳಬಾಳು ಬಡಾವಣೆಯಲ್ಲಿರುವ ಮಾಗನೂರು ಬಸಪ್ಪ ಶಾಲೆಯ 236 ಸಂಖ್ಯೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಪುತ್ರಿ ಅಶ್ವಿನಿ, ಪುತ್ರ ಅನಿತ್ ಸೇರಿದಂತೆ ಬಿಜೆಪಿ ನಾಯಕರು ಜೊತೆಯಲ್ಲಿದ್ದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಗಾಯತ್ರಿ ಸಿದ್ದೇಶ್ವರ, ಎಲ್ಲೆಡೆ ಉತ್ತಮ ವಾತಾವರಣ ಇದೆ. ಗೆದ್ದೇ ಗೆಲ್ಲುವ ವಿಶ್ವಾಸ ಇದೆ ಎಂದರು.
ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಕ್ಷೇತ್ರದಲ್ಲಿ ಎಲ್ಲಾ ಕಡೆ ಉತ್ತಮ ವಾತಾವರಣವಿದೆ. ಜನ ಉತ್ಸಾಹದಿಂದ ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ. ಜನರ ಉತ್ಸಾಹ ನೋಡಿದರೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅತೀ ಹೆಚ್ಚು ಮತಗಳಿಂದ ಗೆಲುವು ಪಡೆಯಲಿದ್ದಾರೆ ಎಂದರು.
ಮೂರನೇ ಬಾರಿಯೂ ಬಿಜೆಪಿ ಗೆಲುವು ಪಡೆಯಲಿದ್ದು ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ ಎಂದರು.
ಇದೇ ವೇಳೆ ಅಮೆರಿಕದಿಂದ ಬಂದಿದ್ದ ಜಿ.ಎಂ. ಸಿದ್ದೇಶ್ವರ ಅವರ ಮೊಮ್ಮಗ ಅತ್ರವ್ ಕೋಟೆಹಾಳ್ ಗೌಡರ ಹಾಗೂ ಬೆಂಗಳೂರಿನಿಂದ ಬಂದಿದ್ದ ಮೊಮ್ಮಗಳು ತ್ರಿಶಾ ಗೌಡರ ಅನಿತ್ಕುಮಾರ್ ಪ್ರಥಮ ಬಾರಿಗೆ ಮತದಾನದ ಹಕ್ಕು ಚಲಾಯಿಸಿದರು.