ಕನ್ನಡ ಸಾಹಿತ್ಯಕ್ಕೆ ವಿಶ್ವ ಗುರುವಿನ ಕೊಡುಗೆ ಅಪಾರ

ಕನ್ನಡ ಸಾಹಿತ್ಯಕ್ಕೆ ವಿಶ್ವ ಗುರುವಿನ ಕೊಡುಗೆ ಅಪಾರ

ಜಿಲ್ಲಾಡಳಿತದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಶ್ಲ್ಯಾಘನೆ

ದಾವಣಗೆರೆ, ಮೇ 12 – ಬಸವಣ್ಣನವರು ತಮ್ಮ ವಚನಗಳ ಮೂಲಕ ಸಮಾಜದ ಮೌಢ್ಯತೆ ನಿವಾರಿಸುವ ಜತೆಗೆ ಕನ್ನಡ ಸಾಹಿ ತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಸವ ಜಯಂತಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಶ್ವಗುರು ಹಾಗೂ ಸಾಂಸ್ಕೃತಿಕ ನಾಯಕರಾದ ಬಸವಣ್ಣನವರು ವರ್ಗ ಹಾಗೂ ಜಾತಿ ರಹಿತ ಸಮಾಜ ನಿರ್ಮಿಸುವ  ಮೂಲಕ ಸಾಮಾಜಿಕ ಹರಿಕಾರರಾಗಿದ್ದಾರೆ ಎಂದು ಹೇಳಿದರು.

ಅನುಭವ ಮಂಟಪ ಸ್ಥಾಪಿಸಿದ ಬಸವಣ್ಣ, 12ನೇ ಶತ ಮಾನದಲ್ಲೇ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಕಲ್ಪನೆಯನ್ನು ಹೊಂದಿದ್ದರು. ಈ ನಿಟ್ಟಿನಲ್ಲಿ ಬಸವಣ್ಣನವರನ್ನು  ವಿಶ್ವಗುರು ಹಾಗೂ ಸಾಂಸ್ಕೃತಿಕ ನಾಯಕ ಎಂದು ಕರೆದಿದ್ದಾರೆ ಎಂದರು.

ಹೇಮರೆಡ್ಡಿ ಮಲ್ಲಮ್ಮ ಶಿವನ ಭಕ್ತೆಯಾಗಿ ಬಸವಣ್ಣನವರ ಮಾರ್ಗ ಅನುಸರಿಸಿದ್ದರು. ಮಲ್ಲಮ್ಮರ ಜೀವನ ಎಲ್ಲರಿಗೂ ಸ್ಫೂರ್ತಿ ಮತ್ತು ಮಹಾಸಾಧ್ವಿಯಾಗಿದ್ದರು ಎಂದು ಹೇಳಿದರು.

ಜಿ.ಪಂ. ಸಿಇಓ ಸುರೇಶ್ ಬಿ.ಇಟ್ನಾಳ್, ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ. ಸಂತೋಷ್,  ವಿರಕ್ತಮಠದ  ಬಸವಪ್ರಭು  ಶ್ರೀಗಳು, ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ರುದ್ರಮುನಿ, ಶರಣ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಕೆ.ಬಿ.ಪರಮೇಶ್ವರಪ್ಪ, ಹೇಮರೆಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷ ಡಾ. ಕೊಟ್ರೇಶ್ ಬಿದ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳನಾಯ್ಕ್ ಮತ್ತು ಸಮಾಜದ ಮುಖಂಡರು ಇದ್ದರು.

error: Content is protected !!