ದಾವಣಗೆರೆ, ಮೇ 14- ಮುಂಗಾರು ಹಂಗಾಮಿನ ಫಸಲ್ ಬಿಮಾ ಯೋಜನೆಯಡಿ ಬೆಳೆ ಕಟಾವು ಪ್ರಾಯೋಗಿಕ ಪರೀಕ್ಷೆಯಲ್ಲಿ ಕೆಲವು ವ್ಯತ್ಯಾಸಗಳಾಗಿದ್ದು, ಇವುಗಳನ್ನು ಸರಿಪಡಿಸಿ ರೈತರಿಗೆ ಬೆಳೆ ವಿಮಾ ಪರಿಹಾರ ಒದಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೃಷಿ ವಿಮಾ ಕಂಪನಿ ಅಧಿಕಾರಿಗಳು, ಕೃಷಿ ಅಧಿಕಾರಿಗಳು ಹಾಗೂ ಸಾಂಖ್ಯಿಕ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಂಗಾರು ಹಂಗಾಮಿನಲ್ಲಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮಾ ಕಂತು ಪಾವತಿಸಿದ ರೈತರಿಗೆ ವಿಮಾ ಪರಿಹಾರ ನೀಡಲು ಜಿಲ್ಲೆಯಲ್ಲಿ 40 ಬೆಳೆ ಕಟಾವು ಪರೀಕ್ಷೆ ನಡೆಸಲಾಗಿದ್ದು ಇದರಲ್ಲಿ 17 ಕಡೆ ಮಾಡಿದ ಬೆಳೆ ಕಟಾವು ಪ್ರಾಯೋಗಿಕ ಪರೀಕ್ಷೆ ನಡೆಸಿ ಅಪ್‍ಲೋಡ್ ಮಾಡಿದ ಕೆಲವು ವಿಡಿಯೋಗಳಲ್ಲಿನ ಅಂಶಗಳ ಬಗ್ಗೆ ವಿಮಾ ಕಂಪನಿಯ ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದು ಇವುಗಳ ಬಗ್ಗೆ ಪರಿಶೀಲನೆ ನಡೆಸಿ ಇತ್ಯರ್ಥ ಮಾಡಲಾಯಿತು.
11597 ರೈತರ ಖಾತೆಗಳು ವ್ಯತ್ಯಾಸ
ದಾವಣಗೆರೆ, ಮೇ 14- ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವಾಗಿ ಎರಡನೇ ಕಂತಿನಲ್ಲಿ ಜಿಲ್ಲೆಯ 69575 ರೈತರಿಗೆ ರೂ. 44.35 ಕೋಟಿ ಇನ್ಫುಟ್ ಸಬ್ಸಿಡಿ ಬಿಡುಗಡೆ ಮಾಡಿದ್ದು ದಾಖಲಾತಿ ಹೊಂದಾಣಿಕೆಯಾಗದ 11597 ರೈತರಿಗೆ ಪರಿಹಾರ ಬಿಡುಗಡೆ ಮಾಡ ಲು ಬ್ಯಾಂಕ್ ಖಾತೆಯ ದಾಖಲಾತಿಗಳನ್ನು ಸರಿಪಡಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬ್ಯಾಂಕರ್ಸ್ ಅಧಿಕಾರಿಗಳೊಂದಿಗೆ ನಡೆಸಿದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮೊದಲ ಕಂತಿನಲ್ಲಿ ತಲಾ 2 ಸಾವಿರದಂತೆ 82928 ರೈತರಿಗೆ ಹಾಗೂ ಎರಡನೇ ಹಂತದಲ್ಲಿ 69575 ರೈತರಿಗೆ ಒಟ್ಟು ರೂ.60.23 ಕೋಟಿ ಬೆಳೆ ಪರಿಹಾರ ಬಿಡುಗಡೆ ಮಾಡಲಾಗಿದೆ. ಇನ್ನೂ 11597 ರೈತರಿಗೆ ಇನ್ಫುಟ್ ಸಬ್ಸಿಡಿ ಬಿಡುಗಡೆ ಮಾಡಬೇಕಾಗಿದ್ದು, ಇವರ ಖಾತೆಯ ವಿವರಗಳು ಸರಿಯಾಗಿರದ ಕಾರಣ ಬಿಡುಗಡೆ ಮಾಡಲು ಸಾಧ್ಯವಾಗಿರುವುದಿಲ್ಲ. ಇದರಲ್ಲಿ 5575 ರೈತರ ಖಾತೆಗಳಿಗೆ ಆಧಾರ್ ಜೋಡಣೆಯಾಗಿರುವುದಿಲ್ಲ. ಐಎಫ್ಎಸ್ಸಿ ಕೋಡ್ ತಪ್ಪಾಗಿರುವ 3696, ಫ್ರೂಟ್ಸ್ ಮತ್ತು ಆಧಾರ್ಗೆ ಮಿಸ್ ಮ್ಯಾಚ್ ಆಗಿರುವ 1684, ಆಧಾರ್ ಜೋಡಣೆಯಾಗದ 244 ಸೇರಿದಂತೆ ವಿಫಲ ಪಾವತಿ ಸೇರಿದಂತೆ ಇತರೆ ಕಾರಣದಿಂದ ಪಾವತಿ ಮಾಡಲು ಸಾಧ್ಯವಾಗಿರುವುದಿಲ್ಲ.
ಎಲ್ಲಾ ತಾಲ್ಲೂಕುಗಳಲ್ಲಿ ಪರಿಹಾರದ ಬಗ್ಗೆ ಸಹಾಯಕ್ಕಾಗಿ ಸಹಾಯವಾಣಿ ಸ್ಥಾಪಿಸಲಾಗಿದ್ದು ಇಲ್ಲಿಯವರೆಗೆ 1374 ಕರೆಗಳನ್ನು ಸ್ವೀಕರಿಸಲಾಗಿದೆ. ಬ್ಯಾಂಕ್ಗಳಲ್ಲಿ ಪ್ರತ್ಯೇಕವಾಗಿ ಸಹಾಯ ಮೇಜು ಸ್ಥಾಪನೆ ಮಾಡುವ ಮೂಲಕ ಆಧಾರ್ ಸೀಡಿಂಗ್ ಮಾಡುವುದು ಮತ್ತು ಆಧಾರ್ನಂತೆ ಬ್ಯಾಂಕ್ ಖಾತೆಯನ್ನು ತಿದ್ದುಪಡಿ ಮಾಡುವ ಮೂಲಕ ಆದಷ್ಟು ಬೇಗ ರೈತರ ಖಾತೆಗಳಿಗೆ ಪರಿಹಾರ ಜಮಾ ಮಾಡಲು ದಾಖಲೆಗಳನ್ನು ಸರಿಪಡಿಸುವ ಕೆಲಸವನ್ನು ಎಲ್ಲಾ ಬ್ಯಾಂಕ್ಗಳಿಂದಾಗಬೇಕಾಗಿದೆ ಎಂದರು.
ಸಾಲಕ್ಕೆ ಪರಿಹಾರ ಜಮಾ ಮಾಡುವಂತಿಲ್ಲ: ರೈತರು ಬೆಳೆನಷ್ಟ ಅನುಭವಿಸಿದ್ದು, ಇವರಿಗೆ ಇನ್ಫುಟ್ ಸಬ್ಸಿಡಿ, ಬೆಳೆ ವಿಮಾ ಪರಿಹಾರ ಹಾಗೂ ಉದ್ಯೋಗ ಖಾತರಿಯಡಿ ಕೂಲಿ ಹಣವನ್ನು ಖಾತೆಗೆ ಜಮಾ ಮಾಡಲಾಗಿದ್ದು, ಇದನ್ನು ರೈತರು ಪಡೆದ ಸಾಲಕ್ಕೆ ತೀರುವಳಿ ಮಾಡಬಾರದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ಲೀಡ್ ಮ್ಯಾನೇಜರ್ ಪ್ರಕಾಶ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕೆಲವೊಂದು ಪ್ರಯೋಗಗಳಲ್ಲಿ ನಿಗದಿತ ಸರ್ವೆ ನಂಬರ್ ಬದಲಾಗಿ ಬೇರೆ ಸರ್ವೆ ನಂಬರ್‍ನಲ್ಲಿ ಬೆಳೆ ಕಟಾವು ಪರೀಕ್ಷೆಗಳನ್ನು ಮಾಡಲಾಗಿದ್ದು ಇದು ಮಳೆಯಾಶ್ರಿತ ಅಥವಾ ನೀರಾವರಿ ಆಶ್ರಿತವೋ ಎಂಬ ಬಗ್ಗೆ ವಿಮಾ ಕಂಪನಿ ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದಾಗ, ನೀರಾವರಿ ಅಧಿಸೂಚಿತ ಪ್ರದೇಶ ವಲ್ಲ ಎಂದು ಸ್ಪಷ್ಟಪಡಿಸಿ, ಜಿಲ್ಲೆಯಲ್ಲಿ ಶೇ 70 ಕ್ಕಿಂತ ಅಧಿಕ ಮಳೆಯ ಕೊರತೆಯಾಗಿದ್ದು ಶತಮಾನ ದಲ್ಲಿಯೇ ಅತ್ಯಂತ ಭೀಕರ ಬರಗಾಲವಾಗಿರುತ್ತದೆ. ಆಗಸ್ಟ್‍ನಲ್ಲಿ ಎಷ್ಟು ಮಳೆ ಬರಬೇಕಾಗಿತ್ತು, ಅದರಲ್ಲಿ ತೀವ್ರ ಕೊರತೆ ಉಂಟಾಗಿದ್ದರಿಂದ ಜಿಲ್ಲೆಯಾದ್ಯಂತ ಬೆಳೆಹಾನಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿಯವರು ವಿಮಾ ಕಂಪನಿಯ ಅಧಿಕಾರಿಗಳಿಗೆ ಸ್ಪಷ್ಟಪಡಿಸಿ, ರೈತರ ಹಿತದೃಷ್ಟಿಯಿಂದ ರೈತರ ಪರವಾಗಿ ಎಲ್ಲರೂ ಕೆಲಸ ಮಾಡಬೇಕೆಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರಿನ್ ಭಾನು ಎಸ್.ಬಳ್ಳಾರಿ, ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ವಿಮಾ ಕಂಪನಿ ವಲಯಾಧಿಕಾರಿ ಕೃಷ್ಣರಾಜ, ಸಾಂಖ್ಯಿಕ ಅಧಿಕಾರಿ ನೀಲಾ ಉಪಸ್ಥಿತರಿದ್ದರು.