ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ : ನಗರದಲ್ಲಿ ಸಂಭ್ರಮಾಚರಣೆ

ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ : ನಗರದಲ್ಲಿ ಸಂಭ್ರಮಾಚರಣೆ

ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಧನ್ಯವಾದ : ದಿನೇಶ್ ಕೆ. ಶೆಟ್ಟಿ

ದಾವಣಗೆರೆ, ಮೇ 20 – ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿರುವ ಜಿಲ್ಲಾ ಕಾಂಗ್ರೆಸ್, ಪಕ್ಷದ ಕಛೇರಿಯಲ್ಲಿ ಇಂದು ಸಿಹಿ ಹಂಚಿ ಪಟಾಕಿ ಸಿಡಿಸಿ ಜೈಕಾರ ಹಾಕಿತು.

ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟ ಬಹುಮತ ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದ ರಾಜ್ಯದ ಮತದಾರರ ಪ್ರಜ್ಞಾವಂತಿಕೆಯಿಂದಾಗಿ ಇಂದು ಒಂದು ವರ್ಷ ಯಶಸ್ವಿಯಾಗಿ ಪೂರೈಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದರು.

ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದ ಗಳಿಂದಾಗಿ ನಲುಗಿ ಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಯನ್ನು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನರು ಕೊಟ್ಟಿದ್ದು ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲಾಗುತ್ತಿದೆ ಎಂದರು.

ಇಂತಹ ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತು ಉಳಿಸಿಕೊಂಡಿದ್ದೇವೆ. ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ, ಅಭಿವೃದ್ದಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡಲಾಗುವುದು ಎಂದರು.

ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧ ಪಕ್ಷಗಳು ಜಾತಿ -ಧರ್ಮಗಳನ್ನು ರಾಜಕೀಯದ ಅಸ್ತ್ರಗಳನ್ನಾಗಿ ಬಳಸಿಕೊಂಡು ನಮ್ಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿ ಯಾಗದೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದು ಕೋರಿದರು.

ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್. ಮಲ್ಲಿಕಾರ್ಜುನ್, ಕಾರ್ಯದರ್ಶಿ ಎ.ನಾಗರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶಿವಕುಮಾರ್, ಆರ್.ಹೆಚ್. ನಾಗಭೂಷಣ್ ಅವರುಗಳು ಮಾತನಾಡಿ, ರಾಜ್ಯದ ಸರ್ವತೋಮುಖ ಅಭಿವೃದ್ದಿಯ ನಿಟ್ಟಿನಲ್ಲಿ ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು ಎಂದರು.

ಎಲ್ಲಾ ಸಮುದಾಯಗಳಿಗೂ ಪಕ್ಷಾತೀತವಾಗಿ ಕೆಲಸ ಮಾಡುತ್ತಲೇ ಸಮಾನತೆ, ಸಮಾನತೆಯ ಸಿದ್ಧಾಂತವನ್ನು ಕಾಂಗ್ರೆಸ್ ಸರ್ಕಾರ ಪಸರಿಸಿದೆ. ನಮ್ಮ ಖಾತರಿಗಳು 4.60 ಕೋಟಿ ಫಲಾನುಭವಿಗಳನ್ನು ತಲುಪುತ್ತಿವೆ ಎಂದರು.

ಗೃಹಲಕ್ಷ್ಮಿ ಯೋಜನೆ : ಕಳೆದ ವರ್ಷ ಆಗಸ್ಟ್‍ನಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂತು. ಮನೆಯ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ ಕೊಡುತ್ತಿದ್ದೇವೆ. ನಾವು ಅಧಿಕಾರಕ್ಕೆ ಬಂದ 9 ತಿಂಗಳೊಳಗೆ 5 ಗ್ಯಾರಂಟಿಗಳು ಜಾರಿಯಾಗಿವೆ. ಮಧ್ಯವರ್ತಿಗಳ ಹಾವಳಿ ಇಲ್ಲದೆ 1 ಕೋಟಿ 20 ಲಕ್ಷ ಮನೆ ಯಜಮಾನಿಯರಿಗೆ ನೇರವಾಗಿ ಖಾತೆಗಳಿಗೆ ಹಣ ಹಾಕಲಾಗುತ್ತಿದೆ ಎಂದರು. ಗೃಹ ಜ್ಯೋತಿ ಅಡಿಯಲ್ಲಿ 1 ಕೋಟಿ 60 ಲಕ್ಷ ಜನರಿಗೆ ಫ್ರೀ ಕರೆಂಟ್ ಕೊಡುತ್ತಿದ್ದೇವೆ. ಜೂ.11 ರಂದು ಶಕ್ತಿ ಯೋಜನೆಯಲ್ಲಿ ಜಾರಿ ಮಾಡಿದ್ವು. ಶಕ್ತಿ ಯೋಜನೆ ಏಪ್ರಿಲ್ ಕೊನೆಯವರೆಗೆ 21 ಕೋಟಿ 33 ಲಕ್ಷಕ್ಕೂ ಅಧಿಕ ಮಹಿಳೆಯರು ಪ್ರಯಾಣ ಮಾಡಿದ್ದಾರೆ. 4857 ಕೋಟಿ ಖರ್ಚು ಮಾಡಿದ್ದೇವೆ. ಅನ್ನಭಾಗ್ಯ ಯೋಜನೆ 4 ಕೋಟಿ 10 ಲಕ್ಷ ಫಲಾನುಭವಿಗಳಿಗೆ 5754.6 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ ಎಂದರು.

1.60 ಕೋಟಿ ಜನರಿಗೆ ಗೃಹಜ್ಯೋತಿ ಯೋಜನೆಯಡಿ ಫ್ರೀ ಕರೆಂಟ್ ನೀಡಿದ್ದೇವೆ. ಇದಕ್ಕೆ 3,436 ಕೋಟಿ ರೂಪಾ ಯಿ ಖರ್ಚು ಆಗಿದೆ. ಗೃಹಲಕ್ಷ್ಮಿ 1 ಕೋಟಿ 20 ಲಕ್ಷ ಯಜ ಮಾನಿಯರಿಗೆ 2029349 ಲಕ್ಷ ಖರ್ಚು ಮಾಡಿದ್ದೇವೆ. ಯುವನಿಧಿ ಯೋಜನೆಯಡಿ 1 ಲಕ್ಷದ 53 ಸಾವಿರ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಿದ್ದೇವೆ. ಯುವಕರಿಗೆ ಕೌಶಲ್ಯಾಭಿವೃದ್ಧಿ ಇಲಾಖೆ ಯಿಂದ ಉದ್ಯೋಗ ತರಬೇತಿ ನೀಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್‍ನ ರಾಜೇಶ್ವರಿ, ಯುವ ಕಾಂಗ್ರೆಸ್‍ನ ಸಾಗರ್ ಎಲ್.ಹೆಚ್., ರಾಘವೇಂದ್ರ ಗೌಡ, ಸುಭಾನ್ ಸಾಬ್, ರಾಕೇಶ್, ಗೋಪಿ (ಅಂತು) ಸುರೇಶ್, ಹನುಮಂತರಾಜ್ (ಪಾಪಣ್ಣಿ), ರಾಘವೇಂದ್ರ ಮತ್ತಿತರರಿದ್ದರು.

error: Content is protected !!