ಶಿಕ್ಷಣ ಫೌಂಡೇಷನ್, ಆರೋಗ್ಯ- ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಜಿಪಂ ಸಿಇಓ ಸುರೇಶ್ ಇಟ್ನಾಳ್
ದಾವಣಗೆರೆ, ಮೇ 21 – ಈ ವರ್ಷ ಜಿಲ್ಲೆಯಲ್ಲಿನ 20 ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಡಿಜಿಟಲೀಕರಣ ಮಾಡಲಾಗು ತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಫೌಂಡೇಷನ್ ಮತ್ತು ಡೆಲ್ ಸಂಸ್ಥೆಯ ಸಹಯೋಗದಲ್ಲಿ ಈ ಕಾರ್ಯ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಶಿಕ್ಷಣ ಫೌಂಡೇಷನ್ ಸಿ.ಇ.ಓ. ಲೆಪ್ಟಿನೆಂಟ್ ಕಮಾಂಡರ್ ಎನ್. ಸುನಿಲ್ ಮತ್ತು ಆರೋಗ್ಯ, ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದ 6000 ಸಾವಿರ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ, 4000 ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಡಿಜಿಟಲೀಕರಣ ಮಾಡುವ ಕಾರ್ಯ ಮುಂದುವರೆದಿದೆ. ಈ ವರ್ಷ ರಾಜ್ಯದ 1000 ಗ್ರಂಥಾಲಯಗಳಿಗೆ ಡಿಜಿಟಲೀಕರಣ ಅಳವಡಿಕೆ ಹಾಗೂ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕಳೆದ ವರ್ಷ 61 ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಡಿಜಿಟಲೀ ಕರಣದ ಮೂಲಕ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮ ಅನುಷ್ಠಾನ ಮಾಡಲಾಗಿದೆ. ಜೊತೆಗೆ ಈ ವರ್ಷ 20 ಗ್ರಾಮ ಪಂಚಾಯತ್ ಗ್ರಂಥಾ ಲಯಗಳಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನ ಮಾಡು ವ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಗ್ರಾಮಾಂತರ ಪ್ರದೇಶದಲ್ಲಿನ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು, ಈ ಯೋಜನೆಯ ಉದ್ದೇಶವಾಗಿದೆ. ಇದಕ್ಕೆ ಪೂರಕವಾಗಿ ಲ್ಯಾಪ್‍ಟಾಪ್, ಆಂಡ್ರಾಯ್ಡ್ ಮೊಬೈಲ್. ಮಾನಿಟರ್, ಟಿವಿ, ಇಂಟರ್‍ನೆಟ್ ಸಂಪರ್ಕ ಸೇರಿ ಮೂಲ ತಾಂತ್ರಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಶಿಕ್ಷಣ ಫೌಂಡೇಷನ್ ಸಿ.ಇ.ಓ. ಲೆಪ್ಟಿನೆಂಟ್ ಕಮಾಂಡರ್ ಎನ್. ಸುನಿಲ್ ಮಾತನಾಡಿ, ಶಿಕ್ಷಣ ಪೀಡಿಯಾ ಆಪ್ ಮೂಲಕ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ, ನೋಟ್ಸ್, ಸಂಬಂಧಿಸಿದ ವಿಡಿಯೋ, ಚಿತ್ರಗಳನ್ನು ಒದಗಿಸಲಾಗಿದೆ. ಪಿಯುಸಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳಿವೆ. ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಣ್ಣ ಕಥೆಗಳಿವೆ. ಅಲ್ಲದೇ ಯುವಕರು ಡಿಜಿಟಲ್ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಬೇಕಾದ ವ್ಯವಸ್ಥೆಯಿದೆ. ವಿದ್ಯಾರ್ಥಿಗಳು ತಮ್ಮ ಸದಸ್ಯತ್ವ ಸಂಖ್ಯೆಯನ್ನು ನಮೂದಿಸುವ ಮೂಲಕ ಈ ಆಪ್‍ನ ಪ್ರಯೋಜನ ಪಡೆಯಬಹುದಾಗಿದೆ. ಕೃತಕ ಬುದ್ದಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಕುರಿತು ಈ ವರ್ಷ ಮಾಹಿತಿ ನೀಡುವ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಶಿಕ್ಷಣ ಫೌಂಡೇ ಷನ್ ಸಂಸ್ಥೆಯ ಶಂಭುಲಿಂಗ, ಗುರುಪಾದಪ್ಪ, ಸುರೇಶ್ ನಾಯ್ಕ ಹಾಗೂ ಇನ್ನಿತರರು ಭಾವಹಿಸಿದ್ದರು.